ADVERTISEMENT

ಸಿಬಿಐ ನಿರ್ದೇಶಕ ಪ್ರವೀಣ್‌ ಸೂದ್‌ ಅಧಿಕಾರವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 7 ಮೇ 2025, 14:14 IST
Last Updated 7 ಮೇ 2025, 14:14 IST
ಪ್ರವೀಣ್‌ ಸೂದ್‌
ಪ್ರವೀಣ್‌ ಸೂದ್‌   

ನವದೆಹಲಿ: ಸಿಬಿಐ ನಿರ್ದೇಶಕ ಪ್ರವೀಣ್‌ ಸೂದ್‌ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರವು ಬುಧವಾರ ಒಂದು ವರ್ಷ ವಿಸ್ತರಿಸಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಮತ್ತು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಒಳಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸಮಿತಿಯು ಸೋಮವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಪ್ರವೀಣ್‌ ಅವರ ಅಧಿಕಾರಾವಧಿಯನ್ನು ಇದೇ ಮೇ 24ರಿಂದ ಒಂದು ವರ್ಷ ವಿಸ್ತರಿಸುವಂತೆ ಸಮಿತಿ ನೀಡಿರುವ ಶಿಫಾರಸನ್ನು ಸಂಪುಟದ ನೇಮಕಾತಿ ಸಮಿತಿ(ಎಸಿಸಿ) ಅಂಗೀಕರಿಸಿದೆ.

ADVERTISEMENT

1986ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿ ಆಗಿರುವ ಪ್ರವೀಣ್‌ ಸೂದ್‌ ಅವರು 2023ರ ಮೇ 25ರಂದು ಸಿಬಿಐ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಎರಡು ವರ್ಷಗಳ ಅಧಿಕಾರವಧಿಯು ಇದೇ ಮೇ 24ಕ್ಕೆ ಮುಕ್ತಾಯವಾಗಬೇಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.