ಕೋಲ್ಕತ್ತ: ‘ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಹಲವೆಡೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ಜಂಟಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
‘ಒಂದೆಡೆ ಕೋಲ್ಕತ್ತದಲ್ಲಿ ಉದ್ಯಮಿ ರಣ್‌ಧೀರ್ ಕುಮಾರ್ ಬಾರ್ನ್ವಾಲ್ ಅವರ ಕಚೇರಿ ಮತ್ತು ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ. ಇನ್ನೊಂದೆಡೆ ಕೋಲ್ಕತ್ತ, ದುರ್ಗಾಪುರ ಮತ್ತು ಅಸನ್‌ಸೋಲ್‌ನಲ್ಲಿ ಇ.ಡಿ ಶೋಧ ಕಾರ್ಯಾಚರಣೆ ನಡೆಸಿದೆ’ ಎಂದು ಮೂಲಗಳು ಹೇಳಿವೆ.
ಎರಡು ತನಿಖಾ ಸಂಸ್ಥೆಗಳು ಈ ಹಗರಣದ ಬಗ್ಗೆ ತನಿಖೆ ನಡೆಸುತ್ತಿದೆ. ಸಿಬಿಐ ಕ್ರಿಮಿನಲ್ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದರೆ, ಇಡಿಯು ಹಣ ಅಕ್ರಮ ವರ್ಗಾವಣೆ ಆಯಾಮದಲ್ಲಿ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದೆ.
ಈ ಹಿಂದೆ ಪ್ರಕರಣ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜೀರಾ ಬ್ಯಾನರ್ಜಿ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.