ADVERTISEMENT

ಸಂಸದ ಅಭಿಷೇಕ್‌ ಬ್ಯಾನರ್ಜಿ ನಾದಿನಿ ಮನೆಯಲ್ಲಿ ತಪಾಸಣೆ

ಕಲ್ಲಿದ್ದಲು ಕಳ್ಳತನ ಪ್ರಕರಣ: ಮೂರು ಗಂಟೆಗಳ ಕಾಲ ದಾಖಲೆಗಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 14:12 IST
Last Updated 22 ಫೆಬ್ರುವರಿ 2021, 14:12 IST

ಕೋಲ್ಕತ್ತ: ಕಲ್ಲಿದ್ದಲು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡ ಸೋಮವಾರ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಅವರ ನಾದಿನಿ ಮೇನಕಾ ಗಂಭೀರ್‌ ಅವರ ಮನೆಯಲ್ಲಿ ತಪಾಸಣೆ ನಡೆಸಿತು.

ಸಿಬಿಐ ಇಬ್ಬರು ಮಹಿಳಾ ಅಧಿಕಾರಿಗಳು ಸುಮಾರು ಮೂರು ಗಂಟೆಗಳ ಕಾಲ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ನಗರದ ಮೆಟ್ರೊಪಾಲಿಟನ್‌ ಬೈಪಾಸ್‌ ಬಳಿಯ ಮೇನಕಾ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲಿಸಿದರು.

ಕಲ್ಲಿದ್ದಲು ಅಕ್ರಮ ಪ್ರಕರಣದಲ್ಲಿ ತನಿಖೆಗೆ ಸಹಕರಿಸುವಂತೆ ಮೇನಕಾ ಅವರಿಗೆ ಸಿಬಿಐ ಭಾನುವಾರ ನೋಟಿಸ್ ನೀಡಿತ್ತು.

ADVERTISEMENT

ಕಳೆದ ವರ್ಷ ನವೆಂಬರ್‌ನಲ್ಲಿ ಕಲ್ಲಿದ್ದಲು ದಂಧೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಮಾಂಝಿ ಅಲಿಯಾಸ್ ಲಾಲಾ, ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್‌ನ ವ್ಯವಸ್ಥಾಪಕ ಅಮಿತ್ ಕುಮಾರ್ ಧಾರ್ ಹಾಗೂ ಜಾಯೇಶ್ ಚಂದ್ರ ರೈ, ಇಸಿಎಲ್ ಭದ್ರತಾ ಮುಖ್ಯಸ್ಥ ತನ್ಮಯ್ ದಾಸ್, ಸೆಕ್ಯುರಿಟಿ ಇನ್ಸ್‌ಪೆಕ್ಟರ್, ಕುನುಸ್ತೋರಿಯಾ ಧನಂಜಯ್ ರೈ ಮತ್ತು ಎಸ್‌ಎಸ್‌ಐ ಮತ್ತು ಕಾಜೋರ್ ಪ್ರದೇಶದ ಭದ್ರತಾ ಉಸ್ತುವಾರಿ ದೇಬಾಶಿಶ್ ಮುಖರ್ಜಿ ಅವರ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

ಕುನುಸ್ಟೋರಿಯಾ ಮತ್ತು ಕಜೋರಾ ಪ್ರದೇಶಗಳಲ್ಲಿನ ಇಸಿಎಲ್‌ನ ಗುತ್ತಿಗೆ ಗಣಿಗಳಿಂದ ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲು ಕಳ್ಳತನದಲ್ಲಿ ಲಾಲಾ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.