ಲೇಹ್: ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಸ್ಥಾಪಿಸಿರುವ ’ಎಚ್‌ಐಎಲ್’ ಸಂಸ್ಥೆಯು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯನ್ನು (ಎಫ್‌ಸಿಆರ್‌ಎ) ಉಲ್ಲಂಘಿಸಿದೆಯೇ ಎನ್ನುವುದರ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ.
’ಎಚ್‌ಐಎಲ್‘ ಸಂಸ್ಥೆಯ ಹಣಕಾಸು ವಿಚಾರದಲ್ಲಿ ಎರಡು ತಿಂಗಳ ಹಿಂದೆಯೇ ತನಿಖೆ ಆರಂಭವಾಗಿದೆ. ಆದರೆ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ನಡುವೆ ವಾಂಗ್ಚುಕ್ ಪಾಕಿಸ್ತಾನಕ್ಕೆ ಭೇಟಿ ನೀಡಿರುವುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಬುಧವಾರ ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) ಬಂದ್‌ಗೆ ಕರೆ ನೀಡಿತ್ತು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಸಂಘರ್ಷ ಉಲ್ಬಣಗೊಂಡು, ನಾಲ್ವರು ಮೃತಪಟ್ಟು, 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪೊಲೀಸರು 50 ಜನರನ್ನು ಬಂಧಿಸಿದ್ದಾರೆ.
ಈ ಬೆಳವಣಿಗೆ ನಡುವೆಯೇ, ವಾಂಗ್ಚುಕ್ ಎರಡು ವಾರ ಸತ್ಯಾಗ್ರಹವನ್ನು ಹಿಂತೆಗೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.