ADVERTISEMENT

ಭ್ರಷ್ಟಾಚಾರ: ಲಾಲು ಪ್ರಸಾದ್ ವಿರುದ್ಧ ಹೊಸ ಪ್ರಕರಣ, 17 ಸ್ಥಳಗಳಲ್ಲಿ ಸಿಬಿಐ ಶೋಧ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಮೇ 2022, 4:14 IST
Last Updated 20 ಮೇ 2022, 4:14 IST
ಲಾಲು ಪ್ರಸಾದ್ ಯಾದವ್‌
ಲಾಲು ಪ್ರಸಾದ್ ಯಾದವ್‌    

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಿಹಾರ ಆರ್‌ಜೆಡಿ ನಾಯಕ, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್‌ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಾಲು ಪ್ರಸಾದ್ ಯಾದವ್‌ಗೆ ಸಂಬಂಧಿಸಿದ17ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ರೈಲ್ವೆ ಇಲಾಖೆಯ ಉದ್ಯೋಗಕ್ಕಾಗಿ ಆಕಾಂಕ್ಷಿಗಳಿಂದ ನಿರ್ದಿಷ್ಟ ಭೂಮಿ ಅಥವಾ ನಿವೇಶನಗಳನ್ನು ಪಡೆಯಲಾಗಿದೆ ಎಂಬುದು ಲಾಲು ಪ್ರಸಾದ್‌ ವಿರುದ್ಧದ ಹೊಸ ಆರೋಪವಾಗಿದೆ.

ADVERTISEMENT

ಹೊಸ ಪ್ರಕರಣ ಸಂಬಂಧ ಲಾಲು ಪ್ರಸಾದ್ ಹಾಗೂ ಕುಟುಂಬಸ್ಥರಿಗೆ ಸಂಬಂಧಿಸಿದ ಬಿಹಾರ, ದೆಹಲಿಯ ವಿವಿಧ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಮೇವು ಹಗರಣದಲ್ಲಿ ಲಾಲು ಪ್ರಸಾದ್‌ ಇತ್ತೀಚೆಗಷ್ಟೇ ಜಾಮೀನು ಪಡೆದಿದ್ದರು.

ಲಾಲು ಪ್ರಸಾದ್ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ಎಸೆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.