ನವದೆಹಲಿ: ದೇಶದಾದ್ಯಂತ ಮಂಗಳವಾರ ಸಿಬಿಐ ಅಧಿಕಾರಿಗಳು 105 ಸ್ಥಳಗಳಲ್ಲಿ ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವ ಸೈಬರ್ ಅಪರಾಧಿಗಳ ವಿರುದ್ಧ ಶೋಧ ನಡೆಸಿದ್ದಾರೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ನೂರಾರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.
ಈ ಕಾರ್ಯಾಚರಣೆಗೆ ‘ಆಪರೇಷನ್ ಚಕ್ರ‘ ಎಂದು ಹೆಸರಿಡಲಾಗಿದೆ. ಒಟ್ಟು 87 ಸ್ಥಳಗಳಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ರಾಜ್ಯದಲ್ಲಿ ಎರಡು ಕಡೆ ಶೋಧ ಮಾಡಲಾಗಿದೆ ಎಂದು ವರದಿಯಾಗಿದೆ.
ಚಿನ್ನ, ₹2 ಕೋಟಿ ನಗದುಸೇರಿದಂತೆ ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಅಂಡಮಾನ್ ಮತ್ತು ನಿಕೋಬಾರ್ , ದೆಹಲಿ, ಚಂಡೀಗಢ, ಪಂಜಾಬ್, ಗುಜರಾತ್, ಕರ್ನಾಟಕ ಮತ್ತು ಅಸ್ಸಾಂನಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ವಿವಿಧ ಕಾಲ್ಸೆಂಟರ್ಗಳು, ಆನ್ಲೈನ್ ಕೆಫೆಗಳ ಮೇಲೆ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.