ADVERTISEMENT

ಮಹಂತ ಗಿರಿ ಸಾವು: ಎಫ್‌ಐಆರ್‌ ದಾಖಲಿಸಿದ ಸಿಬಿಐ

ಪಿಟಿಐ
Published 24 ಸೆಪ್ಟೆಂಬರ್ 2021, 22:55 IST
Last Updated 24 ಸೆಪ್ಟೆಂಬರ್ 2021, 22:55 IST
ಅಖಾಡ ಪರಿಷತ್‌ನ ಮುಖ್ಯಸ್ಥ ಮಹಾಂತ ನರೇಂದ್ರ ಗಿರಿ
ಅಖಾಡ ಪರಿಷತ್‌ನ ಮುಖ್ಯಸ್ಥ ಮಹಾಂತ ನರೇಂದ್ರ ಗಿರಿ   

ನವದೆಹಲಿ: ಅಖಿಲ ಭಾರತೀಯ ಅಖಾಡ ಪರಿಷತ್‌ ಅಧ್ಯಕ್ಷ ಮಹಂತ ನರೇಂದ್ರ ಗಿರಿ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಎಫ್‌ಐಆರ್‌ ದಾಖಿಲಿಸಿದೆ. ಎಫ್‌ಐಆರ್‌ನಲ್ಲಿ ಐಪಿಸಿ ಸೆಕ್ಷನ್‌ 306 (ಆತ್ಮಹತ್ಯೆಗೆ ಕುಮ್ಮಕ್ಕು) ಉಲ್ಲೇಖಿಸಲಾಗಿದೆ.

ಸ್ವಾಮೀಜಿ ಮೃತದೇಹವು ಅಲಹಾಬಾದ್‌ನ ಬಘಂಬರಿ ಮಠದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದಾದ ಎರಡು ದಿನಗಳ ಬಳಿಕಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT