ಸಿಬಿಐ
ನವದೆಹಲಿ: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಜನರನ್ನು ವಂಚಿಸುತ್ತಿದ್ದ ಸೈಬರ್ ಅಪರಾಧಿಗಳ ವಿರುದ್ಧ ದೆಹಲಿ ಮತ್ತು ಹರಿಯಾಣದ 11 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದ್ದು, ₹1.08 ಕೋಟಿ ನಗದು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಎರಡು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿಯ ಒಂಬತ್ತು ಸ್ಥಳಗಳಲ್ಲಿ ಮತ್ತು ಹರಿಯಾಣದ ಎರಡು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಆರೋಪಿಗಳು ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಮತ್ತು ಕ್ರಿಪ್ಟೊ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಮೂವರು ಆರೋಪಿಗಳ ವಿರುದ್ಧ ಈಗಾಗಲೇ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಸಿಬಿಐ ಹೇಳಿದೆ.
ಶೋಧ ಕಾರ್ಯಾಚರಣೆಯ ವೇಳೆ ಆರು ಲ್ಯಾಪ್‌ಟಾಪ್‌ಗಳು, ಎಂಟು ಮೊಬೈಲ್ ಫೋನ್‌ಗಳು ಮತ್ತು ಒಂದು ಐಪ್ಯಾಡ್ ಅನ್ನು ಪತ್ತೆ ಹಚ್ಚಲಾಗಿದೆ. ಇದರೊಂದಿಗೆ ₹1.08 ಕೋಟಿ ನಗದು, 1,000 ಅಮೆರಿಕನ್ ಡಾಲರ್ ಮೌಲ್ಯದ ವಿದೇಶಿ ಕರೆನ್ಸಿ ಹಾಗೂ 252 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.