ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರದಿಂದ 14 ರಾಜ್ಯಗಳ 76 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದೆ.
ಈ ಸಂಬಂಧ ಸಿಬಿಐ ಇದೇ 14ರಂದು 83 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಆಂಧ್ರಪ್ರದೇಶ, ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಬಿಹಾರ, ಒಡಿಶಾ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಹರಿಯಾಣ, ಛತ್ತೀಸ್ಗಡ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಈ ಶೋಧ ಕಾರ್ಯಾಚರಣೆ ನಡೆಯಲಿದೆ ಎಂದು ಸಿಬಿಐ ವಕ್ತಾರ ಆರ್.ಸಿ.ಜೋಷಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.