ಸಾಂದರ್ಭಿಕ ಚಿತ್ರ
ಕೋಲ್ಕತ್ತ: ಸ್ಥಳೀಯ ಸಂಸ್ಥೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿ ಪಶ್ಚಿಮ ಬಂಗಾಳದ ಸಚಿವ ಫಿರ್ಹಾದ್ ಹಕೀಮ್ ಅವರ ಕೋಲ್ಕತ್ತದ ನಿವಾಸಕ್ಕೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಭಾನುವಾರ ಶೋಧ ನಡೆಸಿದ್ದಾರೆ.
ನಗರಾಭಿವೃದ್ಧಿ ಮತ್ತು ನಗರಪಾಲಿಗೆ ಸಚಿವ ಫಿರ್ಹಾದ್ ಹಕೀಮ್ ಅವರು ಕೋಲ್ಕತ್ತದ ಮೇಯರ್ ಕೂಡ ಆಗಿದ್ದಾರೆ.
ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಆಗಿರುವ ಹಕೀಮ್ ಪಕ್ಷದ ಸಂಘಟನೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದಾರೆ.
ಸಿಬಿಐ ತಂಡ ಹಕೀಮ್ ನಿವಾಸಕ್ಕೆ ದಾಳಿ ಮಾಡಿದ್ದು, ಇಬ್ಬರು ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆ ಮಾಹಿತಿ ನೀಡಿದೆ.
ಸಿಬಿಐ ಶೋಧ ಖಂಡಿಸಿ ಹಕೀಮ್ ಬೆಂಬಲಿಗರು ಅವರ ನಿವಾಸದ ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.