ADVERTISEMENT

ಪಶ್ಚಿಮ ಬಂಗಾಳದ ರಾಜಕೀಯ ಹಿಂಸಾಚಾರ ಪ್ರಕರಣಗಳ ವಿವರ ಕೇಳಿದ ಸಿಬಿಐ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2021, 2:45 IST
Last Updated 21 ಆಗಸ್ಟ್ 2021, 2:45 IST
ಸಿಬಿಐ
ಸಿಬಿಐ   

ನವದೆಹಲಿ (ಪಿಟಿಐ): ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರದ ಸಂದರ್ಭ ವರದಿಯಾದ ಕೊಲೆ, ಕೊಲೆ ಯತ್ನ ಮತ್ತು ಅತ್ಯಾಚಾರ ಪ್ರಕರಣಗಳ ವಿವರಗಳನ್ನು ನೀಡುವಂತೆ ಸಿಬಿಐ ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಹಿಂಸಾಚಾರದ ಸಮಯದಲ್ಲಿ ನಡೆದ ಕೊಲೆ, ಅತ್ಯಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಸಿಬಿಐಗೆ ವಹಿಸುವಂತೆ ಕಲ್ಕತ್ತಾ ಹೈಕೋರ್ಟ್ ಗುರುವಾರ ಆದೇಶ ನೀಡಿರುವುದರಿಂದ, ಅಂತಹ ಪ್ರಕರಣಗಳ ವಿವರಗಳನ್ನು ಒದಗಿಸುವಂತೆ ಪೊಲೀಸ್ ಮಹಾನಿರ್ದೇಶಕರನ್ನುಸಿಬಿಐ ಕೇಳಿದೆ.

ಪಶ್ಚಿಮ ಬಂಗಾಳದಲ್ಲಿ ನಡೆದ ಎಂಟು ಹಂತದ ವಿಧಾನಸಭಾ ಚುನಾವಣೆಯಲ್ಲಿ ಮೇ 2ರಂದು ತೃಣಮೂಲ ಕಾಂಗ್ರೆಸ್ ಗೆಲುವು ಸಾಧಿಸಿದ ನಂತರ ಸಂಭವಿಸಿದ ರಾಜಕೀಯ ಹಿಂಸಾಚಾರದ ತನಿಖೆಗಾಗಿ ಸಿಬಿಐ ನಾಲ್ಕು ತಂಡಗಳನ್ನು ರಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.