ADVERTISEMENT

ಜಾರ್ಖಂಡ್‌ ನ್ಯಾಯಾಧೀಶನ ಹತ್ಯೆ: ತನಿಖೆ ವಹಿಸಿಕೊಂಡ ಸಿಬಿಐ

ಪಿಟಿಐ
Published 4 ಆಗಸ್ಟ್ 2021, 14:11 IST
Last Updated 4 ಆಗಸ್ಟ್ 2021, 14:11 IST
ಸಿಬಿಐ
ಸಿಬಿಐ   

ನವದೆಹಲಿ: ಜಾರ್ಖಂಡ್‌ನ ಧನಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿನ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

‘ಪ್ರಕರಣದ ತನಿಖೆ ವಹಿಸಿಕೊಳ್ಳುವಂತೆ ಜಾರ್ಖಂಡ್‌ ಸರ್ಕಾರ ಸಲ್ಲಿಸಿದ್ದ ಮನವಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಕುರಿತು ಧನಬಾದ್‌ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಅನ್ನು ಸಹ ಪಡೆದುಕೊಳ್ಳಲಾಗಿದೆ’ ಎಂದು ಸಿಬಿಐ ಮೂಲಗಳು ಹೇಳಿವೆ.

ಉತ್ತಮ್ ಆನಂದ್ ಅವರು ಧನಬಾದ್ ಪಟ್ಟಣದ ಜಡ್ಜಸ್ ಕಾಲೊನಿಯಲ್ಲಿ ಜುಲೈ 28ರಂದು ಬೆಳಿಗ್ಗೆ 5 ಗಂಟೆಯಲ್ಲಿ ಜಾಗಿಂಗ್ ಹೊರಟಿದ್ದರು. ಆಗ ವಾಹನವೊಂದು ಡಿಕ್ಕಿ ಹೊಡೆದು, ಪರಾರಿಯಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ದಾರಿಹೋಕರೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.