ADVERTISEMENT

ಅಬಕಾರಿ ಹಗರಣ: ಕೇಜ್ರಿವಾಲ್ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಕದ ತಟ್ಟಲಿರುವ ಸಿಬಿಐ

ಪಿಟಿಐ
Published 27 ಫೆಬ್ರುವರಿ 2026, 10:53 IST
Last Updated 27 ಫೆಬ್ರುವರಿ 2026, 10:53 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

–ಪಿಟಿಐ ಚಿತ್ರ

ನವದೆಹಲಿ: ಅಬಕಾರಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಖುಲಾಸೆಗೊಳಿಸಿರುವ ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ತಕ್ಷಣವೇ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಸಿಬಿಐ ಮೂಲಗಳು ಶುಕ್ರವಾರ ತಿಳಿಸಿವೆ.

ADVERTISEMENT

ತನಿಖೆಯ ಹಲವು ವಿಷಯಗಳನ್ನು ನ್ಯಾಯಾಲಯ ಒಂದೋ ನಿರ್ಲಕ್ಷಿಸಿದೆ ಅಥವಾ ಪರಿಗಣಿಸಿಲ್ಲ. ಹೀಗಾಗಿ ಮೇಲ್ಮನವಿಗೆ ಮುಂದಾಗಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.

ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ತಕ್ಷಣವೇ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿಬಿಐ ಮುಂದಾಗಿದೆ ಎಂದು ವಕ್ತಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್, ಸಿಸೋಡಿಯಾ ಸೇರಿ 21 ಮಂದಿ ವಿರುದ್ಧ ಸಿಐಡಿ ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ತಿರಸ್ಕರಿಸಿದ ನ್ಯಾಯಾಲಯ ಅವರೆಲ್ಲರನ್ನೂ ಖುಲಾಸೆಗೊಳಿಸಿದೆ.

ಖುಲಾಸೆಗೊಂಡವರಲ್ಲಿ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಕೂಡ ಇದ್ದಾರೆ.

ಪ್ರಕರಣದಲ್ಲಿ ಸಿಬಿಐ ನಡೆಸಿದ ತನಿಖೆಯಲ್ಲಿ ಲೋಪಗಳಿವೆ. ಪ್ರಕರಣದಲ್ಲಿ ಕೇಜ್ರಿವಾಲ್ ಹಾಗೂ ಇತರರು ಭಾಗಿಯಾಗಿದ್ದಾರೆ ಎಂದು ಸಾಬೀತುಪಡಿಸುವ ಯಾವ ಅಂಶಗಳೂ ಮೇಲ್ನೋಟಕ್ಕೆ ಕಂಡು ಬಂದಿಲ್ಲ ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.