ADVERTISEMENT

ಫೆ.2ಕ್ಕೆ ಸಿಬಿಎಸ್‌ಇ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಪಿಟಿಐ
Published 28 ಜನವರಿ 2021, 17:04 IST
Last Updated 28 ಜನವರಿ 2021, 17:04 IST
ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌
ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌   

ನವದೆಹಲಿ: ‘ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಫೆಬ್ರುವರಿ 2ರಂದು 10 ಮತ್ತು 12ನೇ ತರಗತಿಗಳ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ’ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಗುರುವಾರ ಹೇಳಿದ್ದಾರೆ.

ಪರೀಕ್ಷೆಯು ಮೇ 4ರಿಂದ ಜೂನ್‌ 10ರವರೆಗೆ ನಿಗದಿಯಾಗಿದೆ. ಆದರೆ ಪೂರ್ಣ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ.

ಶಾಲೆಗಳು ಮಾರ್ಚ್‌1ರಿಂದ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಿದ್ದು, ಜುಲೈ 15ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪೋಖ್ರಿಯಾಲ್‌ ಅವರು ಈ ಹಿಂದೆ ಹೇಳಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.