ADVERTISEMENT

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಪಿಟಿಐ
Published 12 ಡಿಸೆಂಬರ್ 2023, 15:28 IST
Last Updated 12 ಡಿಸೆಂಬರ್ 2023, 15:28 IST
<div class="paragraphs"><p>ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ</p></div>

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ

   

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ಬೋರ್ಡ್‌ ಪರೀಕ್ಷಾ ವೇಳಾಪಟ್ಟಿಯು ಮಂಗಳವಾರ ಪ್ರಕಟಗೊಂಡಿದ್ದು, ಫೆಬ್ರುವರಿ 15ರಿಂದ ಪರೀಕ್ಷೆಗಳು ಆರಂಭಗೊಳ್ಳಲಿವೆ.

ಹತ್ತನೇ ತರಗತಿಯ ಪರೀಕ್ಷೆಗಳು ಮಾರ್ಚ್‌ 14ರಂದು ಕೊನೆಗೊಳ್ಳಲಿದ್ದು, 12ನೇ ತರಗತಿಯ ಪರೀಕ್ಷೆಗಳು ಏಪ್ರಿಲ್‌ 2ರಂದು ಮುಕ್ತಾಯವಾಗಲಿದೆ.

ADVERTISEMENT

‘ವೇಳಾಪಟ್ಟಿ ತಯಾರಿಸುವಾಗ ಎರಡು ವಿಷಯಗಳ ನಡುವೆ ಪರೀಕ್ಷಾ ದಿನಾಂಕಗಳಲ್ಲಿ ಅಂತರ ಇರುವಂತೆ ನೋಡಿಕೊಳ್ಳಲಾಗಿದ್ದು, ಜೆಇಇ ಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ರೂಪಿಸಲಾಗಿದೆ’ ಎಂದು ಪರೀಕ್ಷಾ ನಿರ್ವಾಹಕ ಸನ್ಯಾಮ್‌ ಭಾರದ್ವಾಜ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.