ರಾಹುಲ್ ಸಿಂಗ್
ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ರಾಹುಲ್ ಸಿಂಗ್ ಅವರನ್ನು ಸಿಬಿಎಸ್‌ಇ ಅಧ್ಯಕ್ಷರಾಗಿ ಎರಡು ವರ್ಷದ ಅವಧಿಗೆ ಮುಂದುವರಿಸಲಾಗಿದೆ.
ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಗಸ್ಟ್ 6 ರಂದು ಈ ತೀರ್ಮಾನ ತೆಗೆದುಕೊಂಡಿದೆ.
ರಾಹುಲ್ ಸಿಂಗ್ ಅವರು ಕಳೆದ ವರ್ಷ ಮಾರ್ಚ್‌ನಲ್ಲಿ ಸಿಬಿಎಸ್‌ಇ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
ಪ್ರಸ್ತುತ ನವೆಂಬರ್ 17, 2027ರವರೆಗೆ ರಾಹುಲ್ ಸಿಂಗ್ ಅವರು ಸಿಬಿಎಸ್‌ಇ ಅಧ್ಯಕ್ಷರಾಗಿ ಇರುತ್ತಾರೆ ಎಂದು ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.
ರಾಹುಲ್ ಸಿಂಗ್ ಅವರು 1996ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.