ADVERTISEMENT

ಸಿಬಿಎಸ್‌ಇ: ಪ್ರಶ್ನೆ ಪತ್ರಿಕೆ ಬದಲಾವಣೆ

ಪಿಟಿಐ
Published 26 ನವೆಂಬರ್ 2019, 19:36 IST
Last Updated 26 ನವೆಂಬರ್ 2019, 19:36 IST

ನವದೆಹಲಿ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ವಿಶ್ಲೇಷಣೆಯ ಚಿಂತನೆ ಬೆಳೆಸುವ ನಿಟ್ಟಿನಲ್ಲಿ 2023ರಿಂದ 10 ಮತ್ತು 12ನೇ ತರಗತಿಯ ಪ್ರಶ್ನೆ ಪತ್ರಿಕೆಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ತರಲು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಉದ್ದೇಶಿಸಿದೆ.

‘ದೇಶದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆ ತರುವುದು ಅಗತ್ಯವಿದೆ’ ಎಂದು ಸಿಬಿಎಸ್‌ಇ ಕಾರ್ಯದರ್ಶಿ ಅನುರಾಗ್‌ ತ್ರಿಪಾಠಿ ತಿಳಿಸಿದ್ದಾರೆ.

‘ಈ ವರ್ಷದ 10ನೇ ತರಗತಿ ಪರೀಕ್ಷೆಯಲ್ಲಿ ಶೇಕಡ 20ರಷ್ಟು ವಸ್ತು ನಿಷ್ಠ ಪ್ರಶ್ನೆಗಳು ಇರಲಿವೆ. ಇದರಲ್ಲಿ ಶೇಕಡ 10ರಷ್ಟು ಪ್ರಶ್ನೆಗಳು ಸೃಜನಶೀಲ ಚಿಂತನೆಗೆ ಸಂಬಂಧಿಸಿದ್ದಾಗಿರುತ್ತವೆ. 2023ರ ಹೊತ್ತಿಗೆ 10 ಮತ್ತು 12ನೇ ತರಗತಿಯ ಪ್ರಶ್ನೆಪತ್ರಿಕೆಗಳು ಸೃಜನಶೀಲತೆ, ಆವಿಷ್ಕಾರ ಮತ್ತು ವಿಮರ್ಶಾತ್ಮಕ ಚಿಂತನೆ ಆಧಾರದ ಮೇಲೆಯೇ ರೂಪಿಸಲಾಗುತ್ತದೆ’ ಎಂದು ವಿವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.