ADVERTISEMENT

ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 2 ಮೇ 2019, 10:36 IST
Last Updated 2 ಮೇ 2019, 10:36 IST
   

ನವದೆಹಲಿ: ಸಿಬಿಎಸ್‌ಇಯ 12ನೇ ತರಗತಿಫಲಿತಾಂಶವು ಗುರುವಾರ ಮಧ್ಯಾಹ್ನ ಪ್ರಕಟವಾಗಿದೆ.

ಸಿಬಿಎಸ್‌ಇಯ cbse.nic.in ಮತ್ತು cbseresults.nic.inನಲ್ಲಿ ವಿದ್ಯಾರ್ಥಿಗಳಿಗೆ ಫಲಿತಾಂಶ ಲಭ್ಯ.

2018–19ರ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಇದೇ ವರ್ಷದ ಫೆಬ್ರುವರಿ–ಮಾರ್ಚ್‌ ತಿಂಗಳಲ್ಲಿ ನಡೆಸಲಾಗಿತ್ತು. ಒಟ್ಟು31,14,821 ವಿದ್ಯಾಥಿರ್ಗಳು 10 ಮತ್ತು 12ನೇ ತರಗತಿಯ ಪರೀಕ್ಷೆ ಬರೆದಿದ್ದರು. ದೇಶದ4,974 ಕೇಂದ್ರಗಳಲ್ಲಿ ಮತ್ತು 78 ವಿದೇಶಿ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

ADVERTISEMENT

ಸದ್ಯ 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳುcbse.examresults.net, cbseresults.nic.in ಮತ್ತು results.gov.in ಇವುಗಳಲ್ಲಿ ಫಲಿತಾಂಶ ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.