ADVERTISEMENT

ಸಿಬಿಎಸ್‌ಇ: ಪರೀಕ್ಷಾ ಕೇಂದ್ರಗಳ ಸಂಖ್ಯೆ 3 ಸಾವಿರದಿಂದ 15 ಸಾವಿರಕ್ಕೆ ಏರಿಕೆ

ಪಿಟಿಐ
Published 25 ಮೇ 2020, 18:11 IST
Last Updated 25 ಮೇ 2020, 18:11 IST
ರಮೇಶ್‌ ಪೋಖ್ರಿಯಾಲ್‌ ನಿಶಾಂಕ್
ರಮೇಶ್‌ ಪೋಖ್ರಿಯಾಲ್‌ ನಿಶಾಂಕ್   

ನವದೆಹಲಿ: ಕೊರೊನಾ ಸೋಂಕು ವ್ಯಾಪಿಸುತ್ತಿರುವ ಕಾರಣದಿಂದಾಗಿ ಮುಂಜಾಗ್ರತಾ ಕ್ರಮವಾಗಿ 15 ಸಾವಿರ ಪರೀಕ್ಷಾ ಕೇಂದ್ರಗಳಲ್ಲಿ ಸಿಬಿಎಸ್‌ಇ 10 ಮತ್ತು 12ನೇ ತರಗತಿಗಳ ಬೋರ್ಡ್‌ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ(ಎಚ್‌ಆರ್‌ಡಿ)ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಸೋಮವಾರ ಘೋಷಿಸಿದ್ದಾರೆ.

ಈ ಹಿಂದೆ ಕೇವಲ 3 ಸಾವಿರ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಈ ಪರೀಕ್ಷೆಗಳು ಜುಲೈ 1 ರಿಂದ 15ರವರೆಗೆ ನಡೆಯಲಿದೆ.

‘ಪರೀಕ್ಷೆ ಬರೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಹೆಚ್ಚಿನ ಅಂತರವಿರಬೇಕು ಹಾಗೂ ವಿದ್ಯಾರ್ಥಿಗಳ ಮನೆಯ ಸಮೀಪವೇ ಪರೀಕ್ಷಾ ಕೇಂದ್ರಗಳು ಇರಬೇಕು ಎನ್ನುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ನಿಶಾಂಕ್‌ ತಿಳಿಸಿದರು. ಹೀಗಾಗಿಹೆಚ್ಚಿನ ವಿದ್ಯಾರ್ಥಿಗಳು ತಾವು ಶಿಕ್ಷಣ ಪಡೆಯುತ್ತಿರುವ ಶಾಲೆಗಳಲ್ಲೇ ಪರೀಕ್ಷೆಗಳನ್ನು ಬರೆಯಲಿದ್ದಾರೆ.

ADVERTISEMENT

ಕೋವಿಡ್–19 ಕಂಟೈನ್‌ಮೆಂಟ್‌ ಪ್ರದೇಶಗಳಲ್ಲಿ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ತಲುಪಲು ‌ಆಯಾ ರಾಜ್ಯ ಸರ್ಕಾರಗಳೇ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಗೃಹ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.