ADVERTISEMENT

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ: ಶೇ 94ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜುಲೈ 2022, 9:23 IST
Last Updated 22 ಜುಲೈ 2022, 9:23 IST
ಸಾಂದರ್ಭಿಕ ಚಿತ್ರ (ಐಸ್ಟಾಕ್ ಚಿತ್ರ)
ಸಾಂದರ್ಭಿಕ ಚಿತ್ರ (ಐಸ್ಟಾಕ್ ಚಿತ್ರ)   

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆಗಳ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ.

ಶೇ 94ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

10ನೇ ತರಗತಿ ಹಾಗೂ 12ನೇ ತರಗತಿಯ ಫಲಿತಾಂಶವನ್ನು ಸಿಬಿಎಸ್‌ಇ ಒಂದೇ ದಿನ ಬಿಡುಗಡೆ ಮಾಡಿರುವುದು ಇದೇ ಮೊದಲಾಗಿದೆ.

ADVERTISEMENT

ಬಾಲಕಿಯರ ತೇರ್ಗಡೆ ಪ್ರಮಾಣ ಶೇ 95.21ರಷ್ಟಿದ್ದರೆ, ಬಾಲಕರ ತೇರ್ಗಡೆ ಪ್ರಮಾಣ ಶೇ 93.80ರಷ್ಟಿದೆ.

ವಿದ್ಯಾರ್ಥಿಗಳು cbseresults.nic.in, results.cbse.nic.in, results.gov.in ಅಥವಾ cbse. digitallocker.gov.in ತಾಣಗಳ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ.

10ನೇ ತರಗತಿ ಫಲಿತಾಂಶಕ್ಕೂ ಕೆಲವೇ ಗಂಟೆಗಳ ಮುನ್ನ ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಗೊಂಡಿತ್ತು. ಶೇ 92.71ರಷ್ಟು ಫಲಿತಾಂಶ ದಾಖಲಾಗಿತ್ತು.

ಡಿಜಿ ಲಾಕರ್‌ನಲ್ಲಿ ಫಲಿತಾಂಶ ವೀಕ್ಷಿಸುವುದು, ಅಂಕಪಟ್ಟಿ ಡೌನ್ಲೋಡ್ ಮಾಡುವುದು ಹೇಗೆ?

1. digilocker.gov.in ಆ್ಯಪ್‌ಗೆ ಭೇಟಿ ನೀಡಿ
2. ಮುಖಪುಟದಲ್ಲಿ ಲಾಗಿನ್ ಆಯ್ಕೆಯನ್ನು ಕ್ಲಿಕ್ ಮಾಡಿ
3. ಸಿಬಿಎಸ್‌ಇ ರೋಲ್ ನಂಬರ್ ಅನ್ನು ಯೂಸರ್‌ನೇಮ್ ಜಾಗದಲ್ಲಿ ನಮೂದಿಸಿ. ಪಿನ್ ಅನ್ನು ಪಾಸ್‌ವರ್ಡ್ ಆಗಿ ನಮೂದಿಸಿ (ಸಿಬಿಎಸ್‌ಇ ಶಾಲೆಗಳಲ್ಲಿ ಪಾಸ್‌ವರ್ಡ್ ಪಿನ್ ಅನ್ನು ಈಗಾಗಲೇ ನೀಡಲಾಗಿದೆ).
4. 10ನೇ ತರಗತಿಯ ಅಂಕಪಟ್ಟಿ ಕಾಣಿಸಲಿದೆ.
5. ಡಿಜಿಟಲ್ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.