ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಡಿಸೆಂಬರ್ 16ರಿಂದ ಜನವರಿ 13ರ ವರೆಗೆ ‘ಕೇಂದ್ರೀಯ ಶಿಕ್ಷಕ ಅರ್ಹತಾ ಪರೀಕ್ಷೆ’ (ಸಿಟಿಇಟಿ) ನಡೆಸಲಿದೆ.
‘ದೇಶದ ವಿವಿಧ ಕೇಂದ್ರಗಳಲ್ಲಿ, 20 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಕಂಪ್ಯೂಟರ್ ಆಧಾರಿತ ಪರೀಕ್ಷೆ ಇದಾಗಿರಲಿದೆ’ ಎಂದು ಸಿಬಿಎಸ್ಇ ಪ್ರಕಟಣೆಯಲ್ಲಿ ತಿಳಿಸಿದೆ.
‘ಪಠ್ಯಕ್ರಮ, ಭಾಷೆಗಳು, ಅರ್ಹತೆ, ಶುಲ್ಕ, ಪರೀಕ್ಷಾ ಕೇಂದ್ರಗಳು ಸೇರಿದಂತೆ ಪರೀಕ್ಷೆಗೆ ಸಂಬಂಧಿಸಿದ ವಿವರಗಳು ‘https://ctet.nic.in ’ ವೆಬ್‌ಸೈಟ್‌ನಲ್ಲಿ ಸೆ. 20ರಿಂದ ಲಭ್ಯ ಇರಲಿವೆ’ ಎಂದು ತಿಳಿಸಿದೆ.
ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಕೊನೆಯ ದಿನವಾಗಿದೆ ಎಂದೂ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.