ADVERTISEMENT

ಜ. 29ರಿಂದ ಬಜೆಟ್‌ ಅಧಿವೇಶನಕ್ಕೆ ಶಿಫಾರಸು

ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ

ಪಿಟಿಐ
Published 5 ಜನವರಿ 2021, 12:42 IST
Last Updated 5 ಜನವರಿ 2021, 12:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಸಂಸತ್‌ನ ಬಜೆಟ್‌ ಅಧಿವೇಶನವನ್ನು ಜನವರಿ 29ರಂದು ಆರಂಭಿಸಿ, ಏಪ್ರಿಲ್‌ 8ಕ್ಕೆ ಮುಕ್ತಾಯಗೊಳಿಸಬೇಕು ಎಂದು ಸಂಸದೀಯ ವ್ಯವಹಾರಗಳಿಗೆ ಸಂಬಂಧಿಸಿದ ಸಂಪುಟ ಸಮಿತಿ (ಸಿಸಿಪಿಎ) ಶಿಫಾರಸು ಮಾಡಿದೆ.

ಬಜೆಟ್‌ನ ಮೊದಲ ಹಂತದ ಅಧಿವೇಶನ ಜನವರಿ 29ರಿಂದ ಫೆಬ್ರುವರಿ 15, ಎರಡನೇ ಹಂತದ ಅಧಿವೇಶನ ಮಾರ್ಚ್‌ 8ರಿಂದ ಏಪ್ರಿಲ್‌ 8ರ ವರೆಗೆ ನಡೆಸುವಂತೆಯೂ ಸಮಿತಿ ಶಿಫಾರಸು ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ಸಂಪುಟ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ.

ಜ. 29ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಸಂಸತ್‌ನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವರು. ಫೆಬ್ರುವರಿ 1ರಂದು ಬಜೆಟ್‌ ಮಂಡನೆಯಾಗಬೇಕು ಎಂದೂ ಸಮಿತಿ ಶಿಫಾರಸು ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.