ADVERTISEMENT

‌ಮೆಕ್ಕಾದಲ್ಲಿಯೇ ಇದೆ..: ಮಸೀದಿ–ಮದರಸಾಗಳಲ್ಲಿ ಸಿಸಿಟಿವಿ ಅಳವಡಿಸಿ ಎಂದ BJP ಸಂಸದ

ಪಿಟಿಐ
Published 4 ಡಿಸೆಂಬರ್ 2025, 11:01 IST
Last Updated 4 ಡಿಸೆಂಬರ್ 2025, 11:01 IST
   

ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ಮಸೀದಿಗಳು ಮತ್ತು ಮದರಸಾಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಬಿಜೆಪಿ ಸಂಸದ ಅರುಣ್ ಗೋವಿರ್ ಗುರುವಾರ ಆಗ್ರಹಿಸಿದ್ದಾರೆ.

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಗೋವಿಲ್, ‘ಈ ಬೇಡಿಕೆಯು ಯಾವುದೇ ಧರ್ಮದ ವಿರುದ್ಧವಲ್ಲ ಬದಲಾಗಿ ರಾಷ್ಟೀಯ ಭದ್ರತೆ ಮತ್ತು ಅಮೂಲ್ಯ ಜೀವವನ್ನು ರಕ್ಷಿಸುವ ಉದ್ದೇಶ ಹೊಂದಿದೆ’ ಎಂದಿದ್ದಾರೆ.

‘ದೇವಾಲಯ, ಚರ್ಚ್‌, ಶಾಲಾ ಮತ್ತು ಕಾಲೇಜುಗಳಲ್ಲಿ ಅಳವಡಿಸಿದಂತೆ ಮಸೀದಿಗಳಲ್ಲಿಯೂ ಸಿಸಿಟಿವಿ ಅಳವಳಡಿಸಬೇಕು. ಆ ಮೂಲಕ ಮದರಸಾಗಳು ಮತ್ತು ಮಸೀದಿಗಳಿಗೆ ಭೇಟಿ ನೀಡುವ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ’ ಎಂದು ಹೇಳಿದ್ದಾರೆ.

ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾದಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಹೇಳಿರುವ ಅವರು, ಈ ನಿಟ್ಟಿನಲ್ಲಿ ಸರ್ಕಾರ ಏಕರೂಪದ ರಾಷ್ಟ್ರೀಯ ಭದ್ರತಾ ನೀತಿಯನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.