ನವದೆಹಲಿ: ‘ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರ ಅಧಿಕಾರಾವಧಿಯನ್ನು 2026ರ ಮೇ ತಿಂಗಳವರೆಗೆ ವಿಸ್ತರಿಸಲಾಗಿದೆ’ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ. ಇದೇ 30ರಂದು ಇವರು ನಿವೃತ್ತರಾಗಬೇಕಿತ್ತು.
ಈ ಬಗ್ಗೆ ರಕ್ಷಣಾ ಸಚಿವಾಲಯವು ಮಾಹಿತಿ ನೀಡಿದ್ದು, ‘ಮುಂದಿನ ವರ್ಷದ ಮೇ ತಿಂಗಳವರೆಗೆ ಅಥವಾ ಮುಂದಿನ ಆದೇಶದವರೆಗೆ ಜನರಲ್ ಅನಿಲ್ ಚೌಹಾಣ್ ಅವರು ಇದೇ ಹುದ್ದೆಯಲ್ಲಿ ಮುಂದುವರಿಯುತ್ತಾರೆ’ ಎಂದು ಹೇಳಿದೆ.
ಚೌಹಾಣ್ ಅವರು ಈ ಹುದ್ದೆಯಲ್ಲಿ 2022ರ ಸೆಪ್ಟೆಂಬರ್ 30ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.