ADVERTISEMENT

ಗಡಿಯಲ್ಲಿ ಮತ್ತೆ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ; ಭಾರತ ಪ್ರತ್ಯುತ್ತರ

ಪಿಟಿಐ
Published 30 ಏಪ್ರಿಲ್ 2025, 5:30 IST
Last Updated 30 ಏಪ್ರಿಲ್ 2025, 5:30 IST
ಕದನ ವಿರಾಮ ಉಲ್ಲಂಘಿಸಿದ ಪಾಕ್, ಭಾರತೀಯ ಸೇನೆಯಿಂದ ಪ್ರತ್ಯುತ್ತರ
ಕದನ ವಿರಾಮ ಉಲ್ಲಂಘಿಸಿದ ಪಾಕ್, ಭಾರತೀಯ ಸೇನೆಯಿಂದ ಪ್ರತ್ಯುತ್ತರ   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ (ಎಲ್‍ಒಸಿ) ಉದ್ದಕ್ಕೂ ಮತ್ತು ನಾಲ್ಕು ಜಿಲ್ಲೆಗಳ ಅಂತರರಾಷ್ಟ್ರೀಯ ಗಡಿ (ಐಬಿ) ವಲಯಗಳಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಇಂದು (ಬುಧವಾರ) ತಿಳಿಸಿದ್ದಾರೆ.

ಪಾಕ್ ಸೇನೆಗೆ ಭಾರತೀಯ ಭದ್ರತಾ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿವೆ ಎಂದು ಅವರು ಹೇಳಿದ್ದಾರೆ.

ಜಮ್ಮು ಜಿಲ್ಲೆಯ ಪರ್ಗ್ವಾಲ್ ಮತ್ತು ರಜೌರಿ ಜಿಲ್ಲೆಯ ಸುಂದರ್‌ಬನಿ ಹಾಗೂ ನೌಶೇರಾ ಸೆಕ್ಟರ್‌ಗಳಲ್ಲಿ ಪಾಕ್ ಗುಂಡಿನ ನಡೆಸಿದೆ.

ADVERTISEMENT

ಕಾಶ್ಮೀರ ಕಣಿವೆ ಬಾರಾಮುಲ್ಲಾ ಹಾಗೂ ಕುಪ್ವಾರ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆಯಲ್ಲೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ. ಪೂಂಚ್ ಹಾಗೂ ಅಖ್ನೂರ್ ಸೆಕ್ಟರ್‌ಗಳಲ್ಲೂ ಇದಕ್ಕೆ ಸಮಾನವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಭಾರತ ದೇಶವು ಪಾಕಿಸ್ತಾನದೊಂದಿಗೆ 3,323 ಕಿ.ಮೀ. ಉದ್ದದ ಗಡಿಯನ್ನು ಹಂಚಿಕೊಂಡಿದೆ. ಇದರಲ್ಲಿ ಗುಜರಾತ್‌ನಿಂದ ಜಮ್ಮುವಿನ ಅಖ್ನೂರ್‌ವರೆಗೆ ಸುಮಾರು 2,400ಕಿ.ಮೀ. ಉದ್ದದ ಅಂತರರಾಷ್ಟ್ರೀಯ ಗಡಿ (ಐಬಿ), ಜಮ್ಮುವಿನಿಂದ ಲೇಹ್‌ವರೆಗೆ 740 ಕಿ.ಮೀ. ಉದ್ದದ ಎಲ್‍ಒಸಿ ಮತ್ತು ಸಿಯಾಚಿನ್ ಪ್ರದೇಶದಲ್ಲಿ 110 ಕಿ.ಮೀ. ಉದ್ದದ ಎಜಿಪಿಎಲ್ ಸೇರಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.