ನವದೆಹಲಿ: ನಕಲಿ ಬಿಲ್ ಸೃಷ್ಟಿಸಿದ ಆರೋಪದ ಮೇಲೆ ನೌಕಾಪಡೆಯ ನಾಲ್ವರು ಅಧಿಕಾರಿಗಳು ಸೇರಿದಂತೆ 14 ಜನರ ಮೇಲೆ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪಶ್ಚಿಮ ನೌಕಾ ದಳಕ್ಕೆ ಐಟಿ ಹಾರ್ಡ್‌ವೇರ್ ಪೂರೈಸುವ ನೆಪದಲ್ಲಿ ₹ 6.76 ಕೋಟಿ ಮೌಲ್ಯದ ನಕಲಿ ಬಿಲ್‌ಗಳನ್ನು ಸೃಷ್ಟಿಸಲಾಗಿತ್ತು.
ಈ ಸಂಬಂಧ ನಾಲ್ವರು ನೌಕಾಪಡೆಯ ಅಧಿಕಾರಿಗಳು ಸೇರಿದಂತೆ 14 ಜನರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.