ADVERTISEMENT

ಕಾವೇರಿ ನದಿಗೆ ಹೊಸ ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ಇಲ್ಲ: ಕೇಂದ್ರ ಸರ್ಕಾರ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2025, 15:34 IST
Last Updated 4 ಫೆಬ್ರುವರಿ 2025, 15:34 IST
<div class="paragraphs"><p>ಕಾವೇರಿ ನದಿ</p></div>

ಕಾವೇರಿ ನದಿ

   

ನವದೆಹಲಿ: ಕಾವೇರಿ ನದಿಗೆ ಹೊಸ ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ. 

ರಾಜ್ಯಸಭೆಯಲ್ಲಿ ಸದಸ್ಯ ಎಸ್‌.ಕಲ್ಯಾಣಸುಂದರಂ ಕೇಳಿದ ಪ್ರಶ್ನೆಗೆ ಜಲಶಕ್ತಿ ಖಾತೆಯ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಈ ಉತ್ತರ ನೀಡಿದ್ದಾರೆ. ‌ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೆ ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಐದು ವರ್ಷಗಳ ಹಿಂದೆಯೇ ಪ್ರಸ್ತಾವ ಸಲ್ಲಿಸಿದೆ. ಕಾವೇರಿ ಕಣಿವೆಯ ಹೆಚ್ಚುವರಿ ನೀರು ಬಳಕೆಗೆ ತಮಿಳುನಾಡು ಸರ್ಕಾರ ‘ಕಾವೇರಿ– ವೆಲ್ಲಾರ್–ಗುಂಡಾರ್‌’ ನದಿ ಜೋಡಣೆ ಯೋಜನೆ ಕೈಗೆತ್ತಿಕೊಂಡಿದೆ. ಇದಕ್ಕೂ ಕೇಂದ್ರ ಒಪ್ಪಿಗೆ ನೀಡಿಲ್ಲ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.