ADVERTISEMENT

ಮಹಾರಾಷ್ಟ್ರ | ಶಿವಸೇನಾ ಬಂಡಾಯ ಶಾಸಕರಿಗೆ ‘Y+’ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜೂನ್ 2022, 8:01 IST
Last Updated 26 ಜೂನ್ 2022, 8:01 IST
ಗುವಾಹಟಿಯ ರ್‍ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಶಿವಸೇನಾದ ಬಂಡಾಯ ಶಾಸಕರು (ಟ್ವಿಟರ್ ಚಿತ್ರ)
ಗುವಾಹಟಿಯ ರ್‍ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಶಿವಸೇನಾದ ಬಂಡಾಯ ಶಾಸಕರು (ಟ್ವಿಟರ್ ಚಿತ್ರ)   

ಮುಂಬೈ: ಕೇಂದ್ರ ಸರ್ಕಾರವು ಶಿವಸೇನಾದ 15 ಮಂದಿ ಬಂಡಾಯ ಶಾಸಕರಿಗೆ ‘Y+’ ಶ್ರೇಣಿಯ ಸಿಆರ್‌ಪಿಎಫ್‌ ಭದ್ರತೆ ಒದಗಿಸಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎನ್‌ಎನ್ಐ’ ಟ್ವೀಟ್ ಮಾಡಿದೆ.

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಂಡಾಯ ಶಾಸಕರಿಗೆ ಸೂಕ್ತ ಭದ್ರತೆ ಕಲ್ಪಸುವಂತೆ ರಾಜಕೀಯ ಮುಖಂಡರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.

ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿ (ಎಂವಿಎ) ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಏಕನಾಥ ಶಿಂಧೆ ನೇತೃತ್ವದ 40ಕ್ಕೂ ಹೆಚ್ಚು ಶಾಸಕರ ತಂಡ ಗುವಾಹಟಿಯ ರ್‍ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಬೀಡುಬಿಟ್ಟಿದೆ.

ADVERTISEMENT

ಇತ್ತ ಸರ್ಕಾರ ಉಳಿಸಿಕೊಳ್ಳುವುದರ ಜತೆಗೆ ಬಂಡಾಯ ಶಾಸಕರು ಬಿಸಿ ಮುಟ್ಟಿಸಲು ಮುಂದಾಗಿದ್ದ ಸಿಎಂ ಉದ್ಧವ್ ಠಾಕ್ರೆ ಶಾಸಕರಿಗೆಹಾಗೂ ಅವರ ಕುಟುಂಬದವರಿಗೆ ನೀಡಿದ್ದ ಭದ್ರತೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದರು.

ಠಾಕ್ರೆ ಅವರ ಈ ಕ್ರಮ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.