ADVERTISEMENT

‘ಕಾಳಸಂತೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆಯಿರಿ’: ಕೇಂದ್ರ ಸರ್ಕಾರ

ಅಗತ್ಯ ವಸ್ತುಗಳ ಪೂರೈಕೆಗೆ ಕಾನೂನು ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 20:15 IST
Last Updated 8 ಏಪ್ರಿಲ್ 2020, 20:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಅಗತ್ಯ ವಸ್ತುಗಳನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ಪೂರೈಕೆಯಾಗುವಂತೆ ಕಾನೂನು ಕ್ರಮಕೈಗೊಳ್ಳುವಂತೆ ಸೂಚಿಸಿರುವ ಕೇಂದ್ರ ಸರ್ಕಾರ, ಕಾಳಸಂತೆಯಲ್ಲಿ ಮಾರಾಟ ಮಾಡುವವರನ್ನು ವಶಕ್ಕೆ ಪಡೆಯಿರಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈ ಬಗ್ಗೆ ಎಲ್ಲ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್‌ ಭಲ್ಲಾ ಪತ್ರ ಬರೆದಿದ್ದಾರೆ.

‘ಅಗತ್ಯ ವಸ್ತುಗಳ ಕಾಯ್ದೆ–1955’ ಅನ್ನು ಜಾರಿಗೊಳಿಸುವ ಮೂಲಕ ಅಗತ್ಯವಿರುವ ಎಲ್ಲ ವಸ್ತುಗಳು ಸಾರ್ವಜನಿಕರಿಗೆ ಲಭಿಸುವಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.