ADVERTISEMENT

ಕೋವಿಡ್‌: 45 ವರ್ಷ ಮೇಲ್ಪಟ್ಟ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಲು ಕೇಂದ್ರ ಸೂಚನೆ

ಪಿಟಿಐ
Published 6 ಏಪ್ರಿಲ್ 2021, 12:40 IST
Last Updated 6 ಏಪ್ರಿಲ್ 2021, 12:40 IST
ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಆರೋಗ್ಯ ಸಿಬ್ಬಂದಿ–ಸಾಂದರ್ಭಿಕ ಚಿತ್ರ
ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಆರೋಗ್ಯ ಸಿಬ್ಬಂದಿ–ಸಾಂದರ್ಭಿಕ ಚಿತ್ರ   

ನವದೆಹಲಿ: ಕೋವಿಡ್‌–19 ನಿಯಂತ್ರಿಸುವ ನಿಟ್ಟಿನಲ್ಲಿ 45 ವರ್ಷ ಮತ್ತು ಅದಕ್ಕಿಂತಲೂ ಮೇಲ್ಪಟ್ಟ ವಯಸ್ಸಿನ ಎಲ್ಲ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳುವಂತೆ ಸರ್ಕಾರ ಮಂಗಳವಾರ ಸೂಚಿಸಿದೆ.

ಲಸಿಕೆ ಹಾಕಿಸಿಕೊಂಡ ನಂತರವೂ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಆಗಾಗ್ಗೆ ಕೈಗಳನ್ನು ತೊಳೆಯುವುದು ಮತ್ತು ಶುಚಿಗೊಳಿಸುವುದು, ಮಾಸ್ಕ್‌ ಧರಿಸುವುದು ಹಾಗೂ ಪರಸ್ಪರ ಅಂತರ ಕಾಯ್ದುಕೊಳ್ಳುವುದನ್ನು ಮುಂದುವರಿಸಬೇಕು ಎಂದು ಸಿಬ್ಬಂದಿ ಸಚಿವಾಲಯ ಆದೇಶದಲ್ಲಿ ಪ್ರಕಟಿಸಿದೆ.

ಪ್ರಸ್ತುತ 45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲ ವ್ಯಕ್ತಿಗಳೂ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ. 'ಕೇಂದ್ರ ಸರ್ಕಾರದ ಸಿಬ್ಬಂದಿಯೂ ತಾವಾಗಿಯೇ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಬೇಕು...' ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ಕಳೆದ ಕೆಲವು ವಾರಗಳಿಂದ ದೇಶದಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಅಪಾಯಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಮಂಗಳವಾರ ಬೆಳಗ್ಗಿನ ವರೆಗೂ 24 ಗಂಟೆಗಳ ಅಂತರದಲ್ಲಿ ದೇಶದಲ್ಲಿ ಕೋವಿಡ್‌ ದೃಢಪಟ್ಟ 96,982 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.