ವಯನಾಡ್(ಕೇರಳ): ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರ ಎಲ್ಲವನ್ನೂ ಮಾಡುತ್ತಿದೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
ವಯನಾಡಿನ ಮಾನಂತವಾಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಬೂತ್ ಮಟ್ಟದ ನಾಯಕರ ಸಭೆಯಲ್ಲಿ ಮಾತನಾಡಿದ ಅವರು, ‘ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಸಂತ್ರಸ್ತರು ಈಗಲೂ ವಸತಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಸೂಕ್ತ ಪರಿಹಾರ ಸಿಕ್ಕಿಲ್ಲ’ ಎಂದು ಹೇಳಿದ್ದಾರೆ.
ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರ ಎಲ್ಲವನ್ನೂ ಮಾಡುತ್ತಿದೆ. ಲೋಕಸಭೆಯಲ್ಲಿ ನಮ್ಮ ಪ್ರಯತ್ನದಿಂದಾಗಿ ವಯನಾಡ್ ಭೂಕುಸಿತವನ್ನು ತೀವ್ರ ಪ್ರಮಾಣದ ದುರಂತ ಎಂದು ಕೇಂದ್ರ ಘೋಷಿಸಿದೆ. ಇದರಿಂದಾಗಿ ಸಂತ್ರಸ್ತರ ಪುನರ್ವಸತಿಗೆ ಹೆಚ್ಚು ಹಣ ಸಿಗಲಿದೆ ಎಂದು ಪ್ರಿಯಾಂಕಾ ಆಶಾಭಾವನೆ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.