ADVERTISEMENT

ಶೇ 50ರಷ್ಟು ಸಿಬ್ಬಂದಿ ಮನೆಯಿಂದ ಕೆಲಸ: ಕೇಂದ್ರ ಆದೇಶ

ಪಿಟಿಐ
Published 3 ಜನವರಿ 2022, 19:04 IST
Last Updated 3 ಜನವರಿ 2022, 19:04 IST
ಸಾಂದರ್ಭಿಕ ಚಿತ್ರ (ಐಸ್ಟಾಕ್ ಕೃಪೆ)
ಸಾಂದರ್ಭಿಕ ಚಿತ್ರ (ಐಸ್ಟಾಕ್ ಕೃಪೆ)   

ನವದೆಹಲಿ: ಕೇಂದ್ರ ಸರ್ಕಾರದ ಅಧೀನ ಕಾರ್ಯದರ್ಶಿಗಿಂತ ಕೆಳ ಶ್ರೇಣಿಯ ಸಿಬ್ಬಂದಿಯಲ್ಲಿ ಶೇ 50ರಷ್ಟು ಮಂದಿ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಿ ಸಿಬ್ಬಂದಿ ಸಚಿವಾಲಯವು ಸೋಮವಾರ ಆದೇಶ ಹೊರಡಿಸಿದೆ.

ಅಂಗವೈಕಲ್ಯ ಇರುವವರು ಮತ್ತು ಗರ್ಭಿಣಿ ನೌಕರರು ಕಚೇರಿಗೆ ಹಾಜರಾಗುವುದಕ್ಕೆ ವಿನಾಯಿತಿ ನೀಡಲಾಗಿದೆ. ದಟ್ಟಣೆಯಾಗುವುದನ್ನು ತಡೆಯಲು ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಪಾಳಿ ವ್ಯವಸ್ಥೆಯಲ್ಲಿ ಕೆಲಸ ಮಾಡುವಂತೆ ಸೂಚಿಸಲಾಗಿದೆ.ಕೋವಿಡ್‌ ಕಂಟೈನ್‌ಮೆಂಟ್‌ ವಲಯಗಳಲ್ಲಿ ನೆಲೆಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಕಂಟೈನ್‌ಮೆಂಟ್‌ ವಲಯವು ಸಹಜ ಸ್ಥಿತಿಗೆ ಮರಳುವವರೆಗೆ ಇದು ಅನ್ವಯವಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT