ADVERTISEMENT

ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ವಿ.ಅನಂತ ನಾಗೇಶ್ವರನ್ ನೇಮಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜನವರಿ 2022, 13:56 IST
Last Updated 28 ಜನವರಿ 2022, 13:56 IST
ಡಾ.ವಿ.ಅನಂತ ನಾಗೇಶ್ವರನ್
ಡಾ.ವಿ.ಅನಂತ ನಾಗೇಶ್ವರನ್   

ನವದೆಹಲಿ: ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಹುದ್ದೆಗೆ ಡಾ.ವಿ.ಅನಂತ ನಾಗೇಶ್ವರನ್ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ.

ಅನಂತ ನಾಗೇಶ್ವರನ್ ಅವರು ಲೇಖಕ, ಪ್ರಾಧ್ಯಪಕ ಹಾಗೂ ಹಣಕಾಸು ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಭಾರತ ಮತ್ತು ಸಿಂಗಾಪುರದಲ್ಲಿ ಹಲವಾರು ವ್ಯಾಪಾರ ಮತ್ತು ನಿರ್ವಹಣಾ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಅವರು ಸೇವೆ ಸಲ್ಲಿಸಿದ್ದಾರೆ.

ಅನಂತ ನಾಗೇಶ್ವರನ್‌ ಅವರು 'ಐಎಫ್‌ಎಂಆರ್‌ ಗ್ರಾಜುಯೇಟ್ ಸ್ಕೂಲ್ ಆಫ್ ಬ್ಯುಸಿನೆಸ್‌'ನ ಡೀನ್ ಆಗಿ ಕಾರ್ಯನಿರ್ವಹಿಸಿದ್ದಾರೆ.

ADVERTISEMENT

2019 ರಿಂದ 2021 ರವರೆಗೆ ಪ್ರಧಾನಿ ಮೋದಿ ಅವರ ಆರ್ಥಿಕ ಸಲಹಾ ಮಂಡಳಿಯ ಅರೆಕಾಲಿಕ ಸದಸ್ಯರೂ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.