ADVERTISEMENT

ಕೋವಿಡ್ ನಿಯಮಾವಳಿ ಪಾಲಿಸದಿದ್ದರೆ ಜೋಡೊ ಯಾತ್ರೆ ನಿಲ್ಲಿಸಿ: ಕೇಂದ್ರ ಆರೋಗ್ಯ ಸಚಿವ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಡಿಸೆಂಬರ್ 2022, 5:30 IST
Last Updated 21 ಡಿಸೆಂಬರ್ 2022, 5:30 IST
ಜೋಡೊ ಯಾತ್ರೆ
ಜೋಡೊ ಯಾತ್ರೆ   

ನವದೆಹಲಿ: ಕೋವಿಡ್–19 ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದಿದ್ದರೇ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು,ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹಲೋತ್ ಅವರಿಗೆ ಪತ್ರ ಬರೆದು ಸೂಚನೆ ಕೊಟ್ಟಿದ್ದಾರೆ.

ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಲ್ಲಿನ ಸ್ಥಿತಿಗತಿ ಕುರಿತು ಚರ್ಚಿಸಿ ಆರೋಗ್ಯ ಸಚಿವರು ಈ ಸೂಚನೆ ಕೊಟ್ಟಿದ್ದಾರೆ.

ಭಾರತ್ ಜೋಡೊ ಯಾತ್ರೆಯಲ್ಲಿ ಕೋವಿಡ್ ತಡೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಪಾಲನೆಯಾಗದಿದ್ದರೇ ಯಾತ್ರೆಯನ್ನು ನಿಲ್ಲಿಸುವುದು ಸೂಕ್ತ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದಈ ವಿಚಾರವನ್ನು ತಲೆಯಲ್ಲಿಟ್ಟುಕೊಳ್ಳಿ ಎಂದು ಪತ್ರದಲ್ಲಿ ಸೂಚಿಸಿದ್ದಾರೆ ಎಂದು ದಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ADVERTISEMENT

ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಪಾದಯಾತ್ರೆ ಬುಧವಾರ ಬೆಳಿಗ್ಗೆ ಹರಿಯಾಣ ಪ್ರವೇಶಿಸಿತು.

ರಾಜಸ್ಥಾನ ಗಡಿಯಲ್ಲಿರುವ ನುಹ್ಹ್ ಬಳಿ ಪಾದಯಾತ್ರೆ ಹರಿಯಾಣ ಪ್ರವೇಶಿಸಿತು. ಈ ವೇಳೆ ಹರಿಯಾಣದ ಕಾಂಗ್ರೆಸ್ ನಾಯಕರು ಸ್ಥಳದಲ್ಲಿ ಹಾಜರಿದ್ದು ಪಾದಯಾತ್ರೆ ಹಾಗೂ ರಾಹುಲ್ ಗಾಂಧಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.

ಹರಿಯಾಣದ ಮಾಜಿ ಸಿಎಂ ಭೂಪೇಂದ್ರ ಸಿಂಗ್ ಹೂಡಾ, ರಂದೀಪ್ ಸಿಂಗ್ ಸುರ್ಜೆವಾಲಾ, ದೀಪೇಂದ್ರ ಸಿಂಗ್ ಹೂಡಾ, ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ಉದಯ್ ಬಾನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.