ADVERTISEMENT

ರೈತರ ಪ್ರತಿಭಟನೆ: ಸಾವಿರಕ್ಕೂ ಹೆಚ್ಚು ಟ್ವಿಟರ್‌ ಖಾತೆಗಳ ತೆರವಿಗೆ ಕೇಂದ್ರ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2021, 5:41 IST
Last Updated 8 ಫೆಬ್ರುವರಿ 2021, 5:41 IST
ಪ್ರಾತಿನಿಧಿಕ ಚಿತ್ರ (ಕೃಪೆ: ರಾಯಿಟರ್ಸ್)
ಪ್ರಾತಿನಿಧಿಕ ಚಿತ್ರ (ಕೃಪೆ: ರಾಯಿಟರ್ಸ್)   

ನವದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿ ತಪ್ಪು ಮಾಹಿತಿ ಹರಡುತ್ತಿರುವ ಆರೋಪದಲ್ಲಿ 1,178 ಪಾಕಿಸ್ತಾನಿ–ಖಾಲಿಸ್ತಾನಿ ಟ್ವಿಟರ್‌ ಖಾತೆಗಳನ್ನು ತೆರವುಗೊಳಿಸುವಂತೆ ಕೇಂದ್ರ ಸರ್ಕಾರವು ಟ್ವಿಟರ್‌ಗೆ ಸೂಚಿಸಿದೆ ಎಂದು ‘ಎಎನ್‌ಐ’ ಟ್ವೀಟ್ ಮಾಡಿದೆ.

ಟ್ವಿಟರ್ ಇನ್ನೂ ಸರ್ಕಾರದ ಆದೇಶಗಳನ್ನು ಸಂಪೂರ್ಣವಾಗಿ ಅನುಸರಿಸಿಲ್ಲ ಎಂದೂ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ.

ರೈತರ ಪ್ರತಿಭಟನೆಗೆ ಸಂಬಂಧಿಸಿ ಈ ಹಿಂದೆಯೂ ಕೆಲವು ಟ್ವಿಟರ್‌ ಖಾತೆಗಳನ್ನು ಬ್ಲಾಕ್ ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು. ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ 'ಸುಳ್ಳು ಮತ್ತು ಪ್ರಚೋದನಕಾರಿ ವಿಚಾರವನ್ನು' ಹಂಚಿಕೊಂಡಿದ್ದ ಆರೋಪದ ಮೇಲೆ 250 ಖಾತೆಗಳನ್ನು ಬ್ಲಾಕ್ ಮಾಡಿದ್ದ ಟ್ವಿಟರ್, ಬಳಿಕ ಆ ಎಲ್ಲ ಖಾತೆಗಳನ್ನು ಮರುಸ್ಥಾಪಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.