ADVERTISEMENT

ಕೇಂದ್ರ ಸರ್ಕಾರವು ಜಾತಿಗಣತಿ ನಡೆಸಲು ಹಿಂದೇಟು ಹಾಕುತ್ತಿರುವುದೇಕೆ? ವೇಣುಗೋಪಾಲ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಅಕ್ಟೋಬರ್ 2023, 11:28 IST
Last Updated 9 ಅಕ್ಟೋಬರ್ 2023, 11:28 IST
ಕೆ.ಸಿ ವೇಣುಗೋಪಾಲ್‌ 
ಕೆ.ಸಿ ವೇಣುಗೋಪಾಲ್‌    

ನವದೆಹಲಿ: ಕೇಂದ್ರ ಸರ್ಕಾರವು ದೇಶದಾದ್ಯಂತ ಜಾತಿಗಣತಿ ನಡೆಸಲು ಹಿಂದೇಟು ಹಾಕುತ್ತಿರುವುದು ಏಕೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದರೂ ಆಗಿರುವ ಕೆ.ಸಿ ವೇಣುಗೋಪಾಲ್‌ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಈಗಾಗಲೇ ದೇಶದ ನೈಜ್ಯ ಚಿತ್ರಣವನ್ನು ಮರೆಮಾಚಿದ್ದಾರೆ. ಕೇಂದ್ರ ಸರ್ಕಾರ ನಿರುದ್ಯೋಗ ಮತ್ತು ಬೆಲೆ ಏರಿಕೆ ಕುರಿತು ಯಾವುದೇ ಕ್ರಮಕೈಗೊಂಡಿಲ್ಲ. ಹಾಗೂ ಅವುಗಳ ಬಗ್ಗೆ ಯೋಚಿಸುವ ಪ್ರಯತ್ನವೂ ಮಾಡಿಲ್ಲ. ಕೇವಲ ಒಬ್ಬರು ಅಥವಾ ಇಬ್ಬರು ಶ್ರೀಮಂತ ವ್ಯಕ್ತಿಗಳ ಬಗ್ಗೆ ಮಾತ್ರ ಚಿಂತಿಸುತ್ತಾರೆ ಹೊರತು ಜನಸಾಮಾನ್ಯ ಕುರಿತಲ್ಲ ಎಂದು ಕಿಡಿಕಾರಿದ್ದಾರೆ.

ದೇಶದ ನಿಜ ಚಿತ್ರಣದ ತಿಳಿದುಕೊಳ್ಳುವ ಅಗತ್ಯವಿದ್ದು, ಜಾತಿಗಣತಿ ಮಾಡಲೇಬೇಕಾದ ಅನಿವಾರ್ಯತೆ ಇದೆ. ಆದರೆ ಕೇಂದ್ರ ಸರ್ಕಾರ ಏಕೆ ಇದರಿಂದ (ಜಾತಿಗಣತಿ) ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದಾರೆಂದು ಕೆ.ಸಿ ವೇಣುಗೋಪಾಲ್‌ ಹೇಳಿದ್ದಾರೆ.

ADVERTISEMENT

ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸಲು ಆದೇಶ ಹೊರಡಿಸಿದೆ. ಬಿಹಾರದಲ್ಲಿ ಜಾತಿ ಸಮೀಕ್ಷೆಯ ಬಿಡುಗಡೆ ಮಾಡಿದ ಕೆಲವೇ ದಿನಗಳಲ್ಲಿ ಈ ಆದೇಶ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.