ADVERTISEMENT

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ವರಾಳೆ ನೇಮಕ

ಪಿಟಿಐ
Published 24 ಜನವರಿ 2024, 20:40 IST
Last Updated 24 ಜನವರಿ 2024, 20:40 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯ ಮೂರ್ತಿ ಪಿ.ಬಿ.ವರಾಳೆ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ರಾಷ್ಟ್ರಪತಿಯವರು ಆದೇಶ ಹೊರಡಿಸಿದ್ದಾರೆ.

ಕೊಲಿಜಿಯಂ ಮಾಡಿದ್ದ ಶಿಫಾರಸಿಗೆ ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದ ಬಳಿಕ ಈ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದರಿಂದಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿದೆ. ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ನೇಮಕ ಮಾಡ ಬೇಕೆಂಬ ಶಿಫಾರಸಿಗೂ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅವರು ಫೆ. 24ರಂದು ನಿವೃತ್ತರಾಗಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.