ADVERTISEMENT

ದೆಹಲಿ HC ಮುಖ್ಯನ್ಯಾಯಮೂರ್ತಿ ಮನಮೋಹನ್‌ಗೆ SC ನ್ಯಾಯಮೂರ್ತಿಯಾಗಿ ಬಡ್ತಿ

ಪಿಟಿಐ
Published 3 ಡಿಸೆಂಬರ್ 2024, 11:09 IST
Last Updated 3 ಡಿಸೆಂಬರ್ 2024, 11:09 IST
<div class="paragraphs"><p>ನ್ಯಾಯಮೂರ್ತಿ ಮನಮೋಹನ್</p></div>

ನ್ಯಾಯಮೂರ್ತಿ ಮನಮೋಹನ್

   

(ಚಿತ್ರ ಕೃಪೆ– X/Cbashker)

ನವದೆಹಲಿ: ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಬಡ್ತಿ ನೀಡಿ ಕೇಂದ್ರ ಸರ್ಕಾರ ಮಂಗಳವಾರ ಅಧಿಸೂಚನೆ ಹೊರಡಿಸಿದೆ.

ADVERTISEMENT

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್, 'ಸಂವಿಧಾನ ನಿಬಂಧನೆಗಳ ಅನ್ವಯ, ಭಾರತದ ಮುಖ್ಯನ್ಯಾಯಮೂರ್ತಿ ಅವರೊಂದಿಗೆ ಸಮಾಲೋಚಿಸಿ ರಾಷ್ಟ್ರಪತಿ ಅವರು ದೆಹಲಿಯ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ ಎಂದು ತಿಳಿಸಿದ್ದಾರೆ.

ನವೆಂಬರ್ 28ರಂದು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ನ್ಯಾಯಮೂರ್ತಿ ಮನಮೋಹನ್ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಒಮ್ಮತದ ಶಿಫಾರಸ್ಸು ಮಾಡಿತ್ತು.

ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನಲ್ಲಿ 34 ನ್ಯಾಯಮೂರ್ತಿ ಹುದ್ದೆಗಳಿವೆ. ಪ್ರಸ್ತುತ 32 ಮಂದಿ ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.