ADVERTISEMENT

ನಿವೃತ್ತ ಮುಖ್ಯನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಕಾನೂನು ಆಯೋಗದ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2022, 14:26 IST
Last Updated 8 ನವೆಂಬರ್ 2022, 14:26 IST
   

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಕಾನೂನು ಆಯೋಗವನ್ನು ರಚಿಸಿದೆ.

ಕಾನೂನು ಆಯೋಗದ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಬಿ.ಎಸ್‌.ಚೌಹಾಣ್‌ ಅವರು 2018 ಸೆಪ್ಟೆಂಬರ್‌ 1ರಂದು ನಿವೃತ್ತರಾದ ಬಳಿಕ ಈ ಹುದ್ದೆಯು ಖಾಲಿ ಇತ್ತು. ಕಳೆದ ನಾಲ್ಕು ವರ್ಷಗಳಿಂದ ಕಾನೂನು ಆಯೋಗವು ನಿಷ್ಕ್ರಿಯವಾಗಿತ್ತು.

ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಟಿ. ಶಂಕರನ್‌, ಪ್ರೊ. ಆನಂದ್‌ ಪಲಿವಾಲ್‌, ಪ್ರೊ. ಡಿ.ಪಿ. ವರ್ಮಾ, ಪ್ರೊ. ರಕಾ ಆರ್ಯ ಮತ್ತು ಎಂ. ಕರುಣಾನಿತಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ADVERTISEMENT

ರಿತು ರಾಜ್ ಅವಸ್ಥಿ ನೇತೃತ್ವದ ಹೈಕೋರ್ಟ್‌ ತ್ರಿಸದಸ್ಯ ನ್ಯಾಯಪೀಠವು ಮಾರ್ಚ್‌ 15ರಂದು ಕರ್ನಾಟಕದ ಪಿಯು ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧವನ್ನು ಎತ್ತಿ ಹಿಡಿದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.