ನವದೆಹಲಿ: ಅಮರನಾಥ ಯಾತ್ರೆಗೆ ಭದ್ರತೆಯನ್ನು ಒದಗಿಸುವ ಸಲುವಾಗಿ 42,000 ಯೋಧರನ್ನು ಒಳಗೊಂಡ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ (ಸಿಎಪಿಎಫ್) 580 ಕಂಪನಿಗಳನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
424 ಕಂಪನಿಗಳು ಕೇಂದ್ರಾಡಳಿತ ಪ್ರದೇಶಕ್ಕೆ ಕಳುಹಿಸಲಾಗಿದ್ದು, ‘ಆಪರೇಷನ್ ಸಿಂಧೂರ’ ಸಮಯದಲ್ಲಿ ಕೇಂದ್ರಾಡಳಿತ ಪ್ರದೇಶಕ್ಕೆ ಸ್ಥಳಾಂತರಗೊಂಡಿದ್ದ 80 ಕಂಪನಿಗಳನ್ನು, ಶ್ರೀನಗರ ಸೇರಿದಂತೆ ಯಾತ್ರೆಯ ಮಾರ್ಗದಲ್ಲಿ ಭಕ್ತರ ಮತ್ತು ಇತರ ಪ್ರದೇಶಗಳ ಸುರಕ್ಷತೆಗೆ ಸ್ಥಳಾಂತರಿಸಲಾಗುವುದು. ಈ ಪಡೆಗಳು ಜೂನ್ ಎರಡನೇ ವಾರದೊಳಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಬರುವಂತೆ ನಿರ್ದೇಶಿಸಲಾಗಿದೆ ಎಂದು ಗೃಹಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಅಮರನಾಥ ಯಾತ್ರೆಯು ಜುಲೈ 3ರಂದು ಆರಂಭಗೊಂಡು, ಆಗಸ್ಟ್ 9ಕ್ಕೆ ಕೊನೆಗೊಳ್ಳಲಿದೆ. ಪಹಲ್ಗಾಮ್ ದಾಳಿಯ ಪರಿಣಾಮ ಈ ಬಾರಿ ಭಕ್ತರಿಗೆ ಹೆಚ್ಚು ಭದ್ರತೆಯನ್ನು ಒದಗಿಸಲು ಈ ಯೋಜನೆಯನ್ನು ರೂಪಿಸಲಾಗಿದೆ. ಒಂದು ಕಂಪನಿಯು 70ರಿಂದ 75 ಸಿಬ್ಬಂದಿಯನ್ನು ಹೊಂದಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.