ADVERTISEMENT

ಸಾಲ ತಗ್ಗಿಸಲು ರಾಜ್ಯಗಳು ಶ್ರಮಿಸಬೇಕು: ನಿರ್ಮಲಾ ಸೀತಾರಾಮನ್

ಪಿಟಿಐ
Published 17 ಡಿಸೆಂಬರ್ 2025, 16:06 IST
Last Updated 17 ಡಿಸೆಂಬರ್ 2025, 16:06 IST
<div class="paragraphs"><p>ನಿರ್ಮಲಾ ಸೀತಾರಾಮನ್</p></div>

ನಿರ್ಮಲಾ ಸೀತಾರಾಮನ್

   

ನವದೆಹಲಿ: ‘ವಿತ್ತೀಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ ಕೇಂದ್ರವು ಸ್ಪಷ್ಟ ಗುರಿಗಳನ್ನು ಹಾಕಿಕೊಂಡಿದೆ. ಇದರಿಂದಾಗಿ ಸಾಲದ ಮಟ್ಟ ಕಡಿಮೆ ಆಗಿದೆ. ಇದೇ ಕ್ರಮಗಳನ್ನು ರಾಜ್ಯ ಸರ್ಕಾರಗಳು ಸಹ ಅಳವಡಿಸಿಕೊಳ್ಳಬೇಕು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಮುಂದಿನ ಆರ್ಥಿಕ ವರ್ಷದಿಂದ ವಿತ್ತೀಯ ಕೊರತೆ ಸೇರಿದಂತೆ ಸಾಲದ ಮಟ್ಟವನ್ನು ಕಡಿಮೆ ಮಾಡುವುದರತ್ತ ಹೆಚ್ಚಿನ ಗಮನ ನೀಡಲಾಗುತ್ತದೆ. 2047ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿಯನ್ನು ಸಾಧಿಸಲು ರಾಜ್ಯಗಳು ತಮ್ಮ ಸಾಲದ ಮಟ್ಟವನ್ನು ಕಡಿಮೆ ಮಾಡಬೇಕು’ ಎಂದು ರಾಜ್ಯಗಳಿಗೆ ಹೇಳಿದ್ದಾರೆ.

ADVERTISEMENT

ಕೇಂದ್ರ ಸರ್ಕಾರವು ಬಜೆಟ್‌ ರೂಪಿಸುವಿಕೆಯಲ್ಲಿ ಪಾರದರ್ಶಕತೆಗಾಗಿ ಸ್ಪಷ್ಟವಾದ ಗುರಿಗಳನ್ನು ನಿಗದಿಪಡಿಸಿದೆ. ಕೋವಿಡ್‌ ನಂತರದ ಅವಧಿಯಲ್ಲಿ ಸಾಲ–ಜಿಡಿಪಿ ಅನುಪಾತ ಶೇ 60ರಷ್ಟಿತ್ತು. ಇದು ಈಗ ಇಳಿಕೆಯ ಹಾದಿ ಹಿಡಿದಿದೆ ಎಂದಿದ್ದಾರೆ.

ಕೋವಿಡ್‌ ನಂತರದ ಅವಧಿಯಲ್ಲಿ ದೇಶದ ಸಾಲ–ಜಿಡಿಪಿಯು ಶೇ 61.4ರಷ್ಟಿತ್ತು. ಆದರೆ, ಕೇಂದ್ರ ಸರ್ಕಾರ ಅಳವಡಿಸಿಕೊಂಡ ನಿಯಮಗಳಿಂದಾಗಿ 2023–24ರಲ್ಲಿ ಈ ಪ್ರಮಾಣ ಶೇ 57.1ಕ್ಕೆ ಇಳಿಯಿತು. ಪ್ರಸಕ್ತ ವರ್ಷದಲ್ಲಿ ಇದು ಶೇ 56.1ಕ್ಕೆ ಬರುವ ನಿರೀಕ್ಷೆ ಇದೆ.

ಪ್ರತಿ ವರ್ಷ ಸಾಲದ ಮಟ್ಟವನ್ನು ಕಡಿಮೆ ಮಾಡುತ್ತಿರುವ ಕೇಂದ್ರ ಸರ್ಕಾರದಂತೆ, ರಾಜ್ಯಗಳು ಹಣಕಾಸು ನಿರ್ವಹಣೆಯಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಆದ್ಯತೆಯಾಗಿ ತೆಗೆದುಕೊಳ್ಳಬೇಕೆಂದು ಸಚಿವರು ಕರೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.