ADVERTISEMENT

15-18 ವರ್ಷದ ಮಕ್ಕಳಿಗೆ ಲಸಿಕೆ, ಮುನ್ನೆಚ್ಚರಿಕೆ ಡೋಸ್; ಮಾರ್ಗಸೂಚಿ ವಿವರ ಇಲ್ಲಿದೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಡಿಸೆಂಬರ್ 2021, 14:40 IST
Last Updated 27 ಡಿಸೆಂಬರ್ 2021, 14:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮತ್ತು ಆರೋಗ್ಯ, ಮುಂಚೂಣಿಯ ಕಾರ್ಯಕರ್ತರು ಹಾಗೂ ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ವೈದ್ಯರ ಶಿಫಾರಸಿನ ಮೇರೆಗೆ ಮುನ್ನೆಚ್ಚರಿಕೆ ಡೋಸ್ (ಬೂಸ್ಟರ್ ಡೋಸ್) ಕೋವಿಡ್ ಲಸಿಕೆ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಇಲಾಖೆಯು ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ.

ಡಿಸೆಂಬರ್ 25 ಕ್ರಿಸ್‌ಮಸ್ ದಿನದಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3ರಿಂದ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದರು. ಆರೋಗ್ಯ ಕಾರ್ಯಕರ್ತರು, ಮುಂಚೂಣಿಯ ಸೇನಾನಿಗಳಿಗೆ ಜತೆಗೆ ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ವೈದ್ಯರ ಶಿಫಾರಸಿನ ಮೇರೆಗೆ ಜನವರಿ 10ರಿಂದ ಮುನ್ನಚ್ಚೆರಿಕೆ ಡೋಸ್ ನೀಡಲಾಗುವುದು ಎಂದು ಹೇಳಿದ್ದರು.

ಕೇಂದ್ರ ಆರೋಗ್ಯ ಇಲಾಖೆ ಪ್ರಕಟಿಸಿರುವ ಮಾರ್ಗಸೂಚಿ ಮುಖ್ಯಾಂಶಗಳು:

ADVERTISEMENT

15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ:
* ಜನವರಿ 3ರಿಂದ ಕೋವಿಡ್ ಲಸಿಕೆ ನೀಡಲಾಗುವುದು.
*'ಕೋವ್ಯಾಕ್ಸಿನ್' ಲಸಿಕೆ ವಿತರಣೆ
*15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿವರು 'ಕೋ-ವಿನ್' ಮೂಲಕ ನೋಂದಾಯಿಸಬಹುದು. ಲಸಿಕೆ ಕೇಂದ್ರಕ್ಕೆ ತೆರಳಿ ಹೆಸರು ನೋಂದಾಯಿಸಬಹುದು.
* ಹುಟ್ಟಿದ ವರ್ಷ 2007 ಅಥವಾ ಅದಕ್ಕಿಂತ ಮೊದಲಿನವರು ಅರ್ಹರು.

ಆರೋಗ್ಯ, ಮುಂಚೂಣಿಯ ಕಾರ್ಯಕರ್ತರುಮತ್ತು ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಮಾರ್ಗಸೂಚಿ:
* ಜ.10ರಿಂದ ಮುನ್ನೆಚ್ಚೆರಿಕೆ ಡೋಸ್ ನೀಡಲಾಗುವುದು.
* ಎರಡನೇ ಡೋಸ್ ಹಾಗೂ ಬೂಸ್ಟರ್ ಡೋಸ್ ನಡುವಣ ಅಂತರ 9 ತಿಂಗಳು ಅಥವಾ 39 ವಾರ.
* ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ವೈದ್ಯರ ಶಿಫಾರಸಿನ ಮೇರೆಗೆ ಜ.10ರಿಂದ ಮುನ್ನಚ್ಚೆರಿಕೆ ಡೋಸ್ ನೀಡಲಾಗುವುದು.
*ಈಗಾಗಲೇ ಅಸ್ತಿತ್ವದಲ್ಲಿರುವ ಕೋ-ವಿನ್ ಖಾತೆಯ ಮೂಲಕ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು.
*ಅಂತಹ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ಹಾಕಿಸಿಕೊಳ್ಳಲು ಕೋ-ವಿನ್ ಮೂಲಕ ಎಸ್‌ಎಂಎಸ್ ಸಂದೇಶ ರವಾನೆಯಾಗಲಿದೆ.
*ಕೋವಿಡ್ ಲಸಿಕೆ ಪ್ರಮಾಣಪತ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ವಿವರ ನಮೂದಿಸಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.