ADVERTISEMENT

ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳ ಶಿಕ್ಷಣದ ವಿಷಯ ಪರಿಶೀಲನೆ –ಕೇಂದ್ರ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2022, 20:40 IST
Last Updated 21 ಮಾರ್ಚ್ 2022, 20:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ಉಕ್ರೇನ್‌ನಿಂದ ವಾಪಸಾಗಿರುವ 22,500ಕ್ಕೂ ಅಧಿಕ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣದ ಮುಂದುವರಿಕೆ ಕುರಿತ ವಿಷಯವನ್ನು ಸರ್ಕಾರ ಪರಿಶೀಲಿಸುತ್ತಿದೆ’ ಎಂದು ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಅವರು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

‘ಈ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣ ಕುರಿತ ಅರ್ಜಿಗಳನ್ನು ಸರ್ಕಾರ‍ಪರಿಶೀಲಿಸುತ್ತಿದೆ. ಎರಡು ಅರ್ಜಿಗಳನ್ನು ಈಗಾಗಲೇ ಇತ್ಯರ್ಥಪಡಿಸಿದೆ’ ಎಂಬ ಸರ್ಕಾರದ ಹೇಳಿಕೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಪೀಠ ದಾಖಲಿಸಿಕೊಂಡಿತು.

ಅರ್ಜಿದಾರರಾದ ವಕೀಲ ವಿಶಾಲ್‌ ತಿವಾರಿ ಅವರು, ವಾಪಸಾಗಿರುವ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಮುಂದುವರಿಸಲು ಯಾವುದೇ ತೊಡಕಾಗದು ಎಂಬ ಖಾತರಿಯನ್ನು ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು.

ADVERTISEMENT

ಉಕ್ರೇನ್‌ನ ಒಡೆಸ್ಸಾದ ನ್ಯಾಷನಲ್‌ ಮೆಡಿಕಲ್‌ ಯೂನಿವರ್ಸಿಟಿ ವಿದ್ಯಾರ್ಥಿನಿ ಫಾತಿಮಾ ಅಹನಾ ಅವರು, ಈ ಕುರಿತು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.