ADVERTISEMENT

ಆಮ್ಲಜನಕ ಪೂರೈಕೆ: ದೆಹಲಿ ಹೈಕೋರ್ಟ್‌ ವಿರುದ್ಧ ಸುಪ್ರೀಂ ಮೊರೆ ಹೋದ ಕೇಂದ್ರ

​ಪ್ರಜಾವಾಣಿ ವಾರ್ತೆ
Published 5 ಮೇ 2021, 7:38 IST
Last Updated 5 ಮೇ 2021, 7:38 IST
   

ನವದೆಹಲಿ: ರಾಷ್ಟ್ರ ರಾಜಧಾನಿಗೆ ಆಮ್ಲಜನಕ ಪೂರೈಕೆ ವಿಚಾರವಾಗಿ ನ್ಯಾಯಾಂಗ ನಿಂದನೆ ನೋಟಿಸ್ ನೀಡಿರುವ ದೆಹಲಿ ಹೈಕೋರ್ಟ್ ವಿರುದ್ಧ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಈ ಕುರಿತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ನ್ಯಾಯಮೂರ್ತಿ ಜೆ.ಚಂದ್ರಚೂಡ್‌ ನೇತೃತ್ವದ ಪೀಠಕ್ಕೆ ಸೂಚಿಸಿದ್ದಾರೆ.

ಈ ಮಧ್ಯೆ, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದರಿಂದ ಈಗಾಗಲೇ ನಿಗದಿಪಡಿಸಿರುವ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.

ದೆಹಲಿಯ ಆಸ್ಪತ್ರೆಗಳಿಗೆ ಅಗತ್ಯವಾದ ಆಮ್ಲಜನಕ ಪೂರೈಸಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಏಕೆ ದಾಖಲಿಸಿಕೊಳ್ಳಬಾರದು ಎಂದು ದೆಹಲಿ ಹೈಕೋರ್ಟ್‌ ಮಂಗಳವಾರ ಪ್ರಶ್ನಿಸಿತ್ತು. ದೆಹಲಿಗೆ ಪ್ರತಿ ದಿನ 700 ಟನ್‌ ಆಮ್ಲಜನಕ ಕೊಡಲಾಗದು ಎಂದು ಕೇಂದ್ರದ ಪರವಾಗಿ ವಾದಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಚೇತನ್‌ ಶರ್ಮಾ ಹೇಳಿದ್ದು ಪೀಠವನ್ನು ಕೆರಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.