ADVERTISEMENT

ಹೈಕೋರ್ಟ್‌ಗಳ 16 ನ್ಯಾಯಮೂರ್ತಿಗಳ ವರ್ಗಾವಣೆ, 17 ನ್ಯಾಯಮೂರ್ತಿಗಳ ನೇಮಕ

ಪಿಟಿಐ
Published 18 ಅಕ್ಟೋಬರ್ 2023, 15:31 IST
Last Updated 18 ಅಕ್ಟೋಬರ್ 2023, 15:31 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ನರೇಂದರ್.ಜಿ ಸೇರಿದಂತೆ 16 ನ್ಯಾಯಮೂರ್ತಿಗಳನ್ನು ವರ್ಗಾವಣೆಗೊಳಿಸಿ ಕೇಂದ್ರ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ನರೇಂದರ್‌ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ. ವಕೀಲ ಕೆ.ವಿ. ಅರವಿಂದ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ADVERTISEMENT

ನ್ಯಾಯಮೂರ್ತಿಗಳ ನೇಮಕ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಕೊಲಿಜಿಯಂ ಮಾಡಿರುವ ಶಿಫಾರಸುಗಳ ಅನುಷ್ಠಾನದಲ್ಲಿ ವಿಳಂಬ ಧೋರಣೆ ತಳೆಯಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ಕೇಂದ್ರದಿಂದ ಈ ಆದೇಶ ಹೊರಬಿದ್ದಿದೆ. 

ವರ್ಗಾವಣೆಗೊಂಡವರಲ್ಲಿ ಮಣಿಪುರ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕೂಡ ಇದ್ದಾರೆ. ಅಲ್ಲದೇ, ದೇಶದ ವಿವಿಧ ಹೈಕೋರ್ಟ್‌ಗಳಿಗೆ ಹೊಸದಾಗಿ 17 ನ್ಯಾಯಮೂರ್ತಿಗಳು ಹಾಗೂ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ಈ ಕುರಿತು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್‌ ಮೇಘವಾಲ್ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.