ADVERTISEMENT

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೊ ಶೇರ್ ಮಾಡದಂತೆ ಸರ್ಕಾರ ಆದೇಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜುಲೈ 2023, 6:04 IST
Last Updated 20 ಜುಲೈ 2023, 6:04 IST
   

ಗುವಾಹಟಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊವನ್ನು ಶೇರ್ ಮಾಡದಂತೆ ಟ್ವಿಟರ್ ಸೇರಿದಂತೆ ಇತರೆ ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಈ ಸಂಬಂಧ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

ಮೇ 4ರಂದು ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊವೊಂದು ಬುಧವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ADVERTISEMENT

ಇಬ್ಬರು ಮಹಿಳೆಯರನ್ನು ಹಿಂಸಿಸುತ್ತಿರುವುದು ದೃಶ್ಯದಲ್ಲಿದೆ. ಇದರಿಂದಾಗಿ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದೆ.

ಈ ಹೇಯ ಕೃತ್ಯದ ಕುರಿತು ಮಣಿಪುರ ಪೊಲೀಸ್ ತನಿಖೆ ನಡೆಸುತ್ತಿದೆ. ಸಾಮಾಜಿಕ ಮಾಧ್ಯಮಗಳು ಭಾರತೀಯ ಕಾನೂನಿಗೆ ಬದ್ಧವಾಗಿರಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.