ADVERTISEMENT

ನಿಗೂಢ ಕಾಯಿಲೆ: ಆಂಧ್ರಕ್ಕೆ ಕೇಂದ್ರ ತಂಡ

ಪಿಟಿಐ
Published 7 ಡಿಸೆಂಬರ್ 2020, 16:43 IST
Last Updated 7 ಡಿಸೆಂಬರ್ 2020, 16:43 IST
ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು
ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು    

ನವದೆಹಲಿ: ಎಲ್ಲೂರಿನಲ್ಲಿ ನಿಗೂಢ ಕಾಯಿಲೆಯಿಂದ ಹಲವರು ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮೂವರು ಸದಸ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ಸೋಮವಾರ ಆಂಧ್ರಪ್ರದೇಶಕ್ಕೆ ಕಳುಹಿಸಿದೆ.

ಉಪ‍ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಅವರೊಂದಿಗೆ ಸೋಮವಾರ ಚರ್ಚಿಸಿದ ಬಳಿಕ ತಂಡವನ್ನು ರವಾನಿಸಲಾಗಿದೆ.

‘ಏಮ್ಸ್‌ನ ತುರ್ತು ಔಷಧ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜಮ್ಶದ್‌ ನಾಯರ್‌, ಪುಣೆಯ ರಾಷ್ಟ್ರೀಯ ವೈರಾಣುಶಾಸ್ತ್ರ ಸಂಸ್ಥೆಯ (ಎನ್‌ಐವಿ) ಸೂಕ್ಷ್ಮ ರೋಗಾಣು ಶಾಸ್ತ್ರಜ್ಞ ಡಾ.ಅವಿನಾಶ್‌ ದಿಯೋಸ್ತವರ್‌ ಹಾಗೂ ನವದೆಹಲಿಯ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಉಪ ನಿರ್ದೇಶಕ ಸಂಕೇತ್‌ ಕುಲಕರ್ಣಿ ಅವರು ಈ ತಂಡದಲ್ಲಿದ್ದಾರೆ’ ಎಂದು ಉಪ ರಾಷ್ಟ್ರಪತಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.