ADVERTISEMENT

ವಲಸೆ ಕಾರ್ಮಿಕರಿಗಾಗಿ 20 ನಿಯಂತ್ರಣ ಕೊಠಡಿ: ಕೇಂದ್ರ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 18:36 IST
Last Updated 20 ಏಪ್ರಿಲ್ 2021, 18:36 IST
   

ನವದೆಹಲಿ: ಕೋವಿಡ್‌ ಪ್ರಸರಣ ತಡೆಗಾಗಿ ವಿವಿಧ ರಾಜ್ಯಗಳು ಹೇರಿರುವ ನಿರ್ಬಂಧಗಳಿಂದ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಥ ಕಾರ್ಮಿಕರ ನೆರವಿಗಾಗಿ 20 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

ಇದೇ ಉದ್ದೇಶಕ್ಕಾಗಿ ಕಳೆದ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿತ್ತು. ಇವುಗಳ ಪೈಕಿ 20 ನಿಯಂತ್ರಣ ಕೊಠಡಿಗಳನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪುನಶ್ಚೇತನಗೊಳಿಸಿದೆ ಎಂದು ಸಚಿವಾಲಯದ ಕಾರ್ಯದರ್ಶಿ ಅಪೂರ್ವಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ರಾಜ್ಯಗಳಲ್ಲಿನ ಮುಖ್ಯಕಾರ್ಮಿಕ ಆಯುಕ್ತರ ಕಚೇರಿಗಳ ಸಮನ್ವಯದೊಂದಿಗೆ ಈ ಕೊಠಡಿಗಳು ಕಾರ್ಯ ನಿರ್ವಹಿಸಲಿವೆ. ತೊಂದರೆ ಎದುರಿಸುತ್ತಿರುವ ಕಾರ್ಮಿಕರು ಇಲಾಖೆಯ ಅಧಿಕಾರಿಗಳನ್ನು ಇ–ಮೇಲ್‌, ಮೊಬೈಲ್‌ ಅಥವಾ ವಾಟ್ಸ್‌ಆ್ಯಪ್‌ ಮೂಲಕ ಸಂಪರ್ಕಿಸಿ, ಪರಿಹಾರ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.