ಜೈಪುರ: ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸುವ ಸಂಬಂಧ ಮಸೂದೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಬುಧವಾರ ಇಲ್ಲಿ ಹೇಳಿದರು.
ಹಿಂದಿ ದೈನಿಕ ಮಹಾನಗರ್ ಟೈಮ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಡಿಜಿಟಲ್ ಮಾಧ್ಯಮವು ಅವಕಾಶಗಳನ್ನು ನೀಡುವ ಜೊತೆಗೆ ಸವಾಲುಗಳನ್ನು ಒಡ್ಡುತ್ತಿದೆ. ಸಮತೋಲನ ಕಾಪಾಡಿಕೊಳ್ಳುವ ಸಲುವಾಗಿ ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.