ನವದೆಹಲಿ(ಪಿಟಿಐ): ಪಿಂಚಣಿದಾರರು ‘ಡಿಜಿಟಲ್ ಜೀವಿತ ಪ್ರಮಾಣಪತ್ರ’ (ಡಿಎಲ್‌ಸಿ) ಸಲ್ಲಿಸುವುದನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ನವೆಂಬರ್‌ನಲ್ಲಿ ಬೃಹತ್ ಆಂದೋಲನ ನಡೆಸಲಿದೆ.
ಪ್ರತಿ ವರ್ಷ ನವೆಂಬರ್‌ನಲ್ಲಿ ಪಿಂಚಣಿದಾರರು ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಹೀಗಾಗಿ ‘ಡಿಎಲ್‌ಸಿ‘ ಸಲ್ಲಿಸುವಂತೆ ಕೇಂದ್ರ ಸರ್ಕಾರದ ಪಿಂಚಣಿದಾರರನ್ನು ಪ್ರೋತ್ಸಾಹಿಸಲು ಈ ಆಂದೋಲನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ (ಡಿಒಪಿಪಿಡಬ್ಲ್ಯು) ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.